25.4 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ರಕ್ಷಣಾ ಕ್ಷೇತ್ರ ಮತ್ತು ಸ್ಪರ್ಧಾತ್ಮಕ ಪರೀಕ್ಷೆ – ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವದ ಪ್ರಯುಕ್ತ ರಕ್ಷಣಾ ಕ್ಷೇತ್ರ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ನಡೆಯಿತು.

ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಾಯಕ ಶಿಕ್ಷಕರಾದ ದೀಕ್ಷಿತ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಕ್ಷಣಾ ಕ್ಷೇತ್ರದಲ್ಲಿನ ವಿವಿಧ ಉದ್ಯೋಗಾವಕಾಶಗಳು, ಸೇನೆಗೆ ಸೇರುವ ವಿಧಾನ, ಅಗತ್ಯ ಅರ್ಹತೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಇಸಾಕ್ ವಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಅಧ್ಯಯನ, ಶಿಸ್ತು, ಸಮಯ ನಿರ್ವಹಣೆ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅಗತ್ಯವೆಂದು ತಿಳಿಸಿದರು.


ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆ ಬೊಗಸೆ, ಚಿಕ್ಕಮಗಳೂರು ಇಲ್ಲಿನ ಸಹಾಯಕ ಶಿಕ್ಷಕರಾದ ಮೋಹನ್ ಕುಮಾರ್ ವಿ, ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ದೀಪಿಕಾ ಉಪಸ್ಥಿತರಿದ್ದರು.
ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಎಲ್ಲಾ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ಷಣಾ ಕ್ಷೇತ್ರ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಭವಿಷ್ಯದ ವೃತ್ತಿ ಆಯ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಯಿತು.
ಪ್ರಶಿಕ್ಷಣಾರ್ಥಿಗಳಾದ ಧನುಶ್ರೀ ಸ್ವಾಗತಿಸಿ, ಕವಿತಾ ವಂದಿಸಿ, ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya
error: Content is protected !!