ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಘಟಕದ ವತಿಯಿಂದ ಪೆರ್ಲ-ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಕ್ಟೋಬರ್ 11ರಿಂದ 17ರವರೆಗೆ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಅ. 17ರಂದು ನಡೆಯಿತು. ‘ನಶಾ ಮುಕ್ತ ಅಭಿಯಾನ’ ಎಂಬ ಧ್ಯೇಯದೊಂದಿಗೆ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ. ಅವರು ವಹಿಸಿದ್ದರು. ಮಹಾಬಲ ಗೌಡ ನಾಗಂದೋಡಿ ಸಮಾರೋಪ ಭಾಷಣ ಮಾಡಿದರು. ವಾಣಿ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ನಿರ್ದೇಶಕರಾದ ಕೃಷ್ಣಪ್ಪ ಗೌಡ ದೇವಸ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ದಿನೇಶ್ ಕೊಯ್ಯುರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಗೌರವ ಉಪಸ್ಥಿತರಾಗಿ ಬಂದಾರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ದಿನೇಶ್ ಖಂಡಿಗ, ಪೆರ್ಲ-ಬೈಪಾಡಿ ಎಸ್ಕೆಡಿಆರ್ಡಿಪಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಬಾಲಂಪಾಡಿ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾದ ಅನಂತರಾಮ ಶಬರಾಯ, ವಾಸಪ್ಪ ಗೌಡ, ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಹರೀಶ್ ಕೋಡಿಮಜಲು, ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಸದಸ್ಯರಾದ ವಸಂತ ನಾಯ್ಕ, ಶ್ರೀ ಸಿದ್ಧಿವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ಪಾರೊಟ್ಟು, ಬಂದಾರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ, ಶಿವಕೃಪಾ ಶಾಮಿಯಾನ ಸರ್ವಿಸಸ್ನ ಪ್ರಶಾಂತ್ ನಿರ್ಮುಡ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ., ಶಿಕ್ಷಕರಾದ ಮಹೇಶ್ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ಸಂಘದ ಕಾರ್ಯದರ್ಶಿಯಾದ ಲೀಲಾವತಿ ಉಪಸ್ಥಿತರಿದ್ದರು.
ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ ಅವರು ಸಮಾರಂಭಕ್ಕೆ ಆಗಮಿಸಿ, ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.
ಶಿಬಿರದ ಏಳು ದಿನಗಳ ಅವಧಿಯಲ್ಲಿ ವ್ಯಸನಮುಕ್ತ ಸಮಾಜದ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ಚಟುವಟಿಕೆಗಳನ್ನು ಆಯೋಜಿಸಲಾಯಿತು.
ಶಿಬಿರಾಧಿಕಾರಿ ದಿನೇಶ್ ಗೌಡ ಯು. ಸ್ವಾಗತಿಸಿದರು. ಸಹ ಶಿಬಿರಾಧಿಕಾರಿ ಶ್ರಾವ್ಯ ಶಿಬಿರದ ವರದಿ ಮಂಡಿಸಿದರು. ಉಪನ್ಯಾಸಕ ಬೆಳಿಯಪ್ಪ ಕೆ. ವಂದಿಸಿದರು. ಉಪನ್ಯಾಸಕಿ ಅನುರಾಧ ಕೆ. ರಾವ್ ಕಾರ್ಯಕ್ರಮ ನಿರೂಪಿಸಿದರು.












