23.8 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ವತಿಯಿಂದ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂತೆಯೇ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಸಾಧನೆಗೈದ ಗೌಡರ ಯಾನೆ ಒಕ್ಕಲಿಗರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಅ.18ರಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ಜರುಗಿತು.

ಪುಂಜಾಲಕಟ್ಟೆ ಅಕ್ಷಯ ಪುಡ್ಸ್ ಮಾಲಕರಾದ ಜಿ. ವಾಸುದೇವ ಗೌಡ ಅವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಕಿರಣ್ ಚಂದ್ರ ಪುಷ್ಪಗಿರಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿಯ ಸಹ ಪ್ರಾಧ್ಯಾಪಕರು ಹಾಗೂ ಸಂಯೋಜಕ ಡಾ| ರವಿ ಎಂ.ಎನ್, ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ನೆಲ್ಯಾಡಿ ಇಲ್ಲಿಯ ಉಪನ್ಯಾಸಕ ಚೇತನ್ ಆನೆಗುಂಡಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಧರ್ನಪ್ಪ ಗೌಡ, ಡಿ.ಎಮ್ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಮಾಜಿ ಅಧ್ಯಕ್ಷ ಸೋಮೇ ಗೌಡ, ಜೊತೆಕಾರ್ಯದರ್ಶಿ ಶ್ರೀನಾಥ್ ಕೆ.ಎಮ್, ಪ್ರತಿಭಾ ಪುರಸ್ಕಾರದ ಸಂಚಾಲಕರಾದ ಯುವರಾಜ್ ಅನಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರಾದ ಗೋಪಾಲ ಕೃಷ್ಣ ಗುಲ್ಲೋಡಿ, ಬಾಲಕೃಷ್ಣ ಬಿರ್ಮೋಟ್ಟು, ವಿಜಯ್ ಕುಮಾರ್ ನ್ಯಾಯತರ್ಪು, ಉಷಾದೇವಿ, ಹರೀಶ್ ಗೌಡ ಬಂದಾರು, ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಸಂತ ಗೌಡ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು.

ನಿವೃತ್ತ ಸೈನಿಕರಾದ ಅಶೋಕ್, ದೇವಪ್ರಸಾದ್ ಗೌಡ, ಮೋಹನ್ ಗೌಡ, ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ, ಡಾ. ಪ್ರಜ್ಞಾ ಕೃಷ್ಣ ಕುಮಾರ್, ಡಾ. ಆದರ್ಶ ಎ.ಎಲ್. , ಡಾ. ಅಭಿಜ್ಞಾ, ಡಾ.ರಿತಿಕಾ ಹಾಗೂ ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಳಿಕ ಎಸೆಸೆಲ್ಸಿ ಮತ್ತು ಪಿಯುಸಿ ಸಾಧಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸರ್ವ ಸದಸ್ಯರು, ಮಹಿಳಾ ವೇದಿಕೆ, ಯುವ ವೇದಿಕೆ, ಸ್ಪಂದನಾ ಸೇವಾ ಸಂಘ, ಹಳೆಕೋಟೆ, ಬೆಳ್ತಂಗಡಿ ಇದರ ಸರ್ವ ಸದಸ್ಯರು, ವಾಣಿ ಸೌಹಾರ್ದ ಕೋ ಆಪರೇಟಿವ್ ಹಳೆಕೋಟೆ, ಬೆಳ್ತಂಗಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳು ಉಪಸ್ಥಿತರಿದ್ದರು. ಜಯಾನಂದ ಗೌಡ ಪ್ರಜ್ವಲ್ ಸ್ವಾಗತಿಸಿದರು. ಕೆ.ಎಂ. ಶ್ರೀನಾಥ್ ನಡ ವಂದಿಸಿದರು. ವಾಣಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯರು ಪ್ರಾರ್ಥಿಸಿದರು.

Related posts

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya
error: Content is protected !!