30.1 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ವಶಕ್ಕೆ: 7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ ಸ್ವಾಧೀನ

ಬೆಳ್ತಂಗಡಿ: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು, ಏಳು ಅಂಕದ ಕೋಳಿಗಳು ಸೇರಿದಂತೆ ವಾಹನಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಅ. 18ರಂದು ಮಧ್ಯಾಹ್ನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸಲಾಗುತ್ತಿದೆ ಎಂಬ ಮಾಹಿತಿ ವೇಣೂರು ಪೊಲೀಸ್ ಠಾಣೆಯ ಪಿಎಸ್‌ ಐ ಅಕ್ಷಯ ಡವಗಿ ಅವರಿಗೆ ಲಭಿಸಿತ್ತು. ಈ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ.

ಪೊಲೀಸರು ದಾಳಿ ನಡೆಸಿದಾಗ ಅಲ್ಲಿದ್ದವರು ಓಡಿಹೋಗಲು ಯತ್ನಿಸಿದ್ದು, ಅವರಲ್ಲಿ ನಾಲ್ವರನ್ನು ಹಿಡಿದು ವಿಚಾರಣೆ ನಡೆಸಿದಾಗ ಮೋಹನ ಗೌಡ (45), ದಿನೇಶ್ (45), ಪ್ರಶಾಂತ (35) ಹಾಗೂ ಧೀರಜ್ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಏಳು ಅಂಕದ ಕೋಳಿಗಳು, ಮೂರು ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋರಿಕ್ಷಾವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!