ಬೆಳ್ತಂಗಡಿ: ಪಡಿತರ ಚೀಟಿ ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ನ. 10 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅ.20 ಕೊನೆಯ ದಿನಾಂಕವಾಗಿತ್ತು.
ಆಹಾರ ಇಲಾಖೆ ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ಮಾಡಬೇಕೆಂದು ಆದೇಶಿಸಿರುವ ಕಾರಣ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಇಲಾಖೆ ಪ್ರಕಟಣೆ
ತಿಳಿಸಿದೆ.












