31 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೂಬಿಕ್ಸ್ ಕ್ಯೂಬ್ ಜೋಡಣೆ; ವೇಣೂರಿನ ಸೋಹಂ ಜೆ. ಕಾರಂತ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ

ವೇಣೂರು: ಕಣ್ಣಿಗೆ ಬಟ್ಟೆ ಕಟ್ಟಿ ಕೇವಲ ಎರಡು ನಿಮಿಷಗಳಲ್ಲಿ ರೂಬಿಕ್ಸ್ ಕ್ಯೂಬ್ (Rubik’s Cube) ಒಗಟನ್ನು ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ (India Book of Records) ವೇಣೂರಿನ ಬಾಲಕ ಸೋಹಂ ಜೆ. ಕಾರಂತ್ ಅವರು ದಾಖಲೆ ಬರೆದು ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.

ಇವರು ದಿವ್ಯದೃಷ್ಟಿಯಿಂದ 2 ನಿಮಿಷ 19 ಸೆಕೆಂಡುಗಳಲ್ಲಿ 2 ರೂಬಿಕ್ ಕ್ಯೂಬ್ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯಿಂದ ಯುವ ಪ್ರತಿಭೆಗಳು ಸಾಧನೆಯ ಶಿಖರಕ್ಕೇರಬಹುದು ಎಂಬುದಕ್ಕೆ ಸೋಹಂ ಮಾದರಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಲಾಗಿದೆ.


ಸೋಹಂ ವೇಣೂರು ಶ್ರೀನಿಧಿ ಎಂಟರ್ ಪ್ರೈಸಸ್‌ನ ಮಾಲಕ ಪಿ. ಜಗದೀಶ್ ಭಟ್ ಮತ್ತು ಶ್ರೀಮತಿ ಶ್ವೇತಾ ಅವರ ಪುತ್ರ.

ಇವರನ್ನು ದ.ಕ. ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ, ಪ್ರಶಾಂತ್ ಗೌಡ ಇದ್ದರು.

Related posts

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!