ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ 18ರoದು ನವರಾತ್ರಿ ಉತ್ಸವ ಪ್ರಯುಕ್ತ ಕ್ಷೇತ್ರದ ತoತ್ರಿಗಳಾದ ವೇದಮೂರ್ತಿ ಶ್ರೀ ಪಾದ ಪಾಂಗಣ್ಣಾಯರವರ ನೇತೃತ್ವದಲ್ಲಿ ಚಂಡಿಕಾ ಯಾಗ ಶ್ರೀ ದುರ್ಗಾ ಪೂಜೆ ಜರಗಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಅನಂತ ಎಸ್ ಇರ್ವತ್ರಾಯ ತoಗೋಯಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.












