30.1 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಬಂದಾರಿನಲ್ಲಿ ಉದ್ಘಾಟನೆ

ಬಂದಾರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ವತಿಯಿಂದ “ವ್ಯಸನಮುಕ್ತ ಮತ್ತು ಕ್ಷಯ ಮುಕ್ತ ಯುವ ಜನತೆ” ಎಂಬ ಆಶಯದೊಂದಿಗೆ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಅ.18ರಿಂದ 24ರವರೆಗೆ ನಡೆಯಲಿರುವ
ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು.

ಎಸ್ ಡಿಎಂ ಸಿ ಅಧ್ಯಕ್ಷ ಉಮೇಶ್ ಪೊಯ್ಯೋಲೆ ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು.

ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಕೆ ಅವರು ಮಾತನಾಡಿ ಶಿಬಿರದ ಉದ್ದೇಶ, ಶಿಬಿರಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿ ಶುಭಹಾರೈಸಿದರು.
ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಇಲ್ಲಿನ ರಕ್ಷಕ ಶಿಕ್ಷಕ ಸಂಘ ಸಂಘದ ಅಧ್ಯಕ್ಷೆ ವಾಹಿಲೆಟ್ ಮೊರಾಸ್, ಸ್ಥಳೀಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ಮುಖ್ಯ ಶಿಕ್ಷಕ ವಿಶ್ವನಾಥ ಎಂ.ಯು.‌ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ವೇದಿಕೆಯಲ್ಲಿ ಶಿಬಿರಾಧಿಕಾರಿಗಳಾದ ಡಾ. ಕುಶಾಲಪ್ಪ ಎಸ್ , ಸ.ಪ್ರ.ದ.ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ದಿವ್ಯ ಪ್ರಭು,
ಸುಮನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕು.ಅನನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಯಕ್ಷ ಸ್ವಾಗತಿಸಿದರು.

Related posts

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya
error: Content is protected !!