32.8 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ವೈಟ್ ಲಿಫ್ಟಿಂಗ್‌ನಲ್ಲಿ ಗಣೇಶ್ ಸುಬ್ರಹ್ಮಣ್ಯಗೆ ಪ್ರಥಮ ಬಹುಮಾನ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯ ಸಾಧನೆಗೆ ಮೆಚ್ಚುಗೆ – ಸಮಾಜ ಸೇವಕ ರವಿ ಪೂಜಾರಿ ಕಕ್ಕೆಪದವು ಅವರ ಸುಪುತ್ರ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಪ್ರಥಮ ಬಿ.ಕಾಂ ವಿದ್ಯಾರ್ಥಿ ಗಣೇಶ್ ಸುಬ್ರಹ್ಮಣ್ಯ ಪ್ರಥಮ ಬಹುಮಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅ. 18ರಂದು ಮೂಡಬಿದಿರೆಯ ದವಳಾ ಕಾಲೇಜಿನಲ್ಲಿ ನಡೆದ ಸ್ಪರ್ಧೆಯಲ್ಲಿ ಗಣೇಶ್ ಸುಬ್ರಹ್ಮಣ್ಯ ಪ್ರಥಮ ಸ್ಥಾನ ಪಡೆದು ಕಾಲೇಜು ಹಾಗೂ ಕುಟುಂಬಕ್ಕೆ ಕೀರ್ತಿ ತಂದಿದ್ದಾರೆ. ಈ ಸಾಧನೆಯ ಮೂಲಕ ಅವರು ಮುಂದಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

ಸಮಾಜಸೇವಕ ರವಿ ಪೂಜಾರಿ ಮತ್ತು ಗೀತಾ ದಂಪತಿಯ ಪುತ್ರನಾಗಿರುವ ಗಣೇಶ್, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಗಳಿಸಿದ್ದಾರೆ. ನಿರಂತರ ಅಭ್ಯಾಸ, ಶಿಸ್ತು, ಪರಿಶ್ರಮ ಹಾಗೂ ಸಾಧಿಸುವ ಛಲದೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವ ಅವರು, ಇದೀಗ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಸಮಾಜಸೇವೆಯ ಮೂಲಕ ಗುರುತಿಸಿಕೊಂಡ ರವಿ ಪೂಜಾರಿ:ಗಣೇಶ್ ಅವರ ತಂದೆ ರವಿ ಪೂಜಾರಿ ಕಕ್ಕೆಪದವು ಅವರು ಸಮಾಜಸೇವೆಯ ಮೂಲಕ ಜನಮನ್ನಣೆ ಗಳಿಸಿದವರು. ನೂರಕ್ಕೂ ಅಧಿಕ ಕುಟುಂಬಗಳಿಗೆ ಮನೆ ಹಾಗೂ ನಿವೇಶನ ಒದಗಿಸುವ ಮೂಲಕ ನಿರ್ಗತಿಕರ ಬದುಕಿಗೆ ಆಸರೆಯಾಗಿದ್ದಾರೆ. ಅಲ್ಲದೆ, ನೂರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ, ಬಡವರು ಹಾಗೂ ದುರ್ಬಲ ವರ್ಗದವರ ನೆರವಿಗೆ ಸದಾ ಸ್ಪಂದಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕಿನಲ್ಲಿ ನೆಲೆ ಕಲ್ಪಿಸಬೇಕೆಂಬ ಕಾಳಜಿಯೊಂದಿಗೆ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರ ಮಾನವೀಯ ಕಾರ್ಯಗಳು ಅನೇಕರ ಬದುಕಿನಲ್ಲಿ ಭರವಸೆಯ ಬೆಳಕಾಗಿವೆ.ಸಮಾಜಸೇವೆಯ ಮೌಲ್ಯಗಳನ್ನು ಮೈಗೂಡಿಸಿಕೊಂಡ ಕುಟುಂಬದಲ್ಲಿ ಬೆಳೆದ ಗಣೇಶ್, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾ ಪ್ರೋತ್ಸಾಹ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಂಸ್ಕೃತಿ ಹಾಗೂ ವಿವಿಧ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ಹಾಗೂ ಸಾಧನೆಗೆ ಅಗತ್ಯವಾದ ವೇದಿಕೆ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಕ್ರೀಡಾಪಟುಗಳು ಉನ್ನತ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಲು ಆಳ್ವಾಸ್ ಸಂಸ್ಥೆ ನೀಡುತ್ತಿರುವ ಪ್ರೋತ್ಸಾಹ ಗಮನಾರ್ಹವಾಗಿದೆ.

Related posts

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ಮಂಪರ್ ಪರೀಕ್ಷೆ-ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!