ಕೊಕ್ಕಡ : ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ದೇವತಾ ಕಾರ್ಯಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಕೊಕ್ಕಡ ಕಾವು (ಕೌಕ್ರಾಡಿ) ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ರೂ.1 ಲಕ್ಷ ದೇಣಿಗೆಯನ್ನು ಸಮರ್ಪಿಸಿದ್ದಾರೆ.
ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಲ್ಲ; ಅವು ನಮ್ಮ ಸಂಸ್ಕೃತಿ, ಸಂಪ್ರದಾಯ, ನಂಬಿಕೆ ಹಾಗೂ ಸನಾತನ ಧರ್ಮದ ಜೀವಂತ ಪ್ರತೀಕಗಳಾಗಿವೆ. ಇಂತಹ ಪವಿತ್ರ ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ ನೀಡುವುದು ಧಾರ್ಮಿಕ ಸೇವೆಯ ಜೊತೆಗೆ ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುವ ಮಹತ್ವದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ನೀಡಿರುವ ದೇಣಿಗೆ ಶ್ಲಾಘನೀಯವಾಗಿದೆ.












