32.8 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಖಂಡನೆ: ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಸ್ಪತ್ರೆಗೆ ಭೇಟಿ ಹಾಗೂ ಬೆಂಬಲ

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದಲ್ಲಿ ಅಂಗಡಿ ಕೋಣೆಗಳ ವಿವಾದಕ್ಕೆ ಸಂಬಂಧಿಸಿದಂತೆ, ನಿಡ್ಲೆ ಗ್ರಾಮದ ಬೂಡುಜಾಲು ಸೂರ್ಲ ಮನೆಯ ನಿಶ್ಮಿತಾ ಎಂಬವರ ಮೇಲೆ ರಾಘವ ಭಂಡಾರಿ ಎಂಬಾತ ದೌರ್ಜನ್ಯವೆಸಗಿದ್ದ ಆರೋಪದಲ್ಲಿ, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿಶ್ಮಿತಾ ಅವರನ್ನು ಇಂದು ಯುವವಾಹಿನಿ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಭೇಟಿಯಾಗಿ, ಅವರಿಗಾದ ಅನ್ಯಾಯವನ್ನು ವಿಚಾರಿಸಿ, ಅವರ ನ್ಯಾಯಪರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕರು ಹಾಗೂ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮುಡುಕೋಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ ಹಾಗೂ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಬಳಂಜ ಉಪಸ್ಥಿತರಿದ್ದರು.

Related posts

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya
error: Content is protected !!