32.7 C
ಪುತ್ತೂರು, ಬೆಳ್ತಂಗಡಿ
October 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿದವರ ಹಾಗೂ ಶಾಂತಿಭಂಗ ಉಂಟುಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಬಯಲು ಆಲಯ, ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟಿ, ಬಾಡಿಗೆ ನೀಡಿ, ವಂಚನೆ ಮಾಡುತ್ತಿರುವವರ ವಿರುದ್ಧ ಹಾಗೂ ಸಾರ್ವಜನಿಕ ಶಾಂತಿ ಭಂಗ ಉಂಟುಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಅ.19ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನಲ್ಲೇನಿದೆ?
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ, ೧೯೯೩ನೇ ಇಸವಿಯಲ್ಲಿ ದೇವಸ್ಥಾನದ ಎದುರಿನಲ್ಲಿ ಕಾಯ್ದಿರಿಸಲಾಗಿದ್ದ ಜಾಗವನ್ನು (ಸರ್ವೇ ನಂಬರ್ ೨೧೫/೧ ( ೨೫೭/೯೨-೯೩, ದಿನಾಂಕ: ೨೮.೦೮.೧೯೯೩) ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ.
೨೦೧೨ ರಿಂದ ೨೦೧೫ರವರೆಗೆ ಶ್ರೀ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್ ಎಂಬುವವರು, ತಾವು ಅಧ್ಯಕ್ಷರಾಗಿರುವ ಅವಧಿಯಲ್ಲಿ ದೇವಸ್ಥಾನದ ಜಾಗವನ್ನು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ನ ಜಾಗದೊಂದಿಗೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುತ್ತಾರೆ. ಈ ಜಾಗದಲ್ಲಿ ಗ್ರಾಮ ಪಂಚಾಯತ್ ಹಾಗೂ ಯಾವುದೇ ಸಂಬಂಧಪಟ್ಟ ಇಲಾಖೆಯ ಪೂರ್ವಾನುಮತಿ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ೫ ಅಂಗಡಿ ಕೋಣೆಗಳನ್ನು ನಿರ್ಮಿಸಿದ್ದಾರೆ.
ಅಲ್ಲದೆ ಅಂಗಡಿ ಕೊಠಡಿಗಳನ್ನು ಕಾನೂನುಬಾಹಿರವಾಗಿ ಇತರೆ ವ್ಯಕ್ತಿಗಳಿಗೆ ಬಾಡಿಗೆಗೆ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಈ ಅಂಗಡಿಗಳನ್ನು ಪಡೆದವರಲ್ಲಿ ಕೆಲವವರು ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಇವರು ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಜಗಳವಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುತ್ತಿದ್ದಾರೆ.
ಈ ರೀತಿಯ ಕೃತ್ಯಗಳು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿ ದೇವಸ್ಥಾನ ಹಾಗೂ ಆಡಳಿತ ಸಮಿತಿಯ ಗೌರವಕ್ಕೆ ಚ್ಯುತಿ ತರುತ್ತಿದ್ದು, ನಕಾರಾತ್ಮಕ ಸುದ್ದಿಗಳು ಹರಡಲು ಕಾರಣವಾಗಿದೆ.

ಆದ್ದರಿಂದ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ಕಟ್ಟಿ ವ್ಯವಹಾರ ನಡೆಸುತ್ತಿರುವವರ ಮೇಲೆಯೂ, ಶಾಂತಿ ಭಂಗ ಉಂಟುಮಾಡುತ್ತಿರುವವರ ಮೇಲೆಯೂ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya
error: Content is protected !!