26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 25: ಬೆಳ್ತಂಗಡಿಯಲ್ಲಿ ಬೃಹತ್ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಶಿಬಿರ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್, ಮಂಗಳೂರು ಹಾಗೂ ಕಣಚೂರು ವೈದ್ಯಕೀಯ ಮಹಾವಿದ್ಯಾಲಯ ಇವುಗಳ ಸಹಯೋಗದೊಂದಿಗೆ ಮತ್ತು NET ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಜೈನ್ ಪೇಟೆ, ಬೆಳ್ತಂಗಡಿ ಇದರ ಸಹಕಾರದೊಂದಿಗೆ ಬೃಹತ್ ರಕ್ತದಾನ ಮತ್ತು ಉಚಿತ ವೈದ್ಯಕೀಯ ಶಿಬಿರವು ಅ. 25 ರಂದು ಬೆಳ್ತಂಗಡಿಯ ಜೈನ್ ಪೇಟೆಯಲ್ಲಿರುವ ಎನ್‌ಇಟಿ (NET) ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳ್ತಂಗಡಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾ ರಕ್ಷಿತ್ ಶಿವರಾಂ ಅವರು ಗಾಲಿ ಕುರ್ಚಿ ಹಾಗೂ ವಾಟರ್ ಬೆಡ್‌ಗಳ ವಿತರಣೆ ಮಾಡಲಿದ್ದಾರೆ.

ಸಾರ್ವಜನಿಕರು ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

ವಿಶೇಷ ಸೇವೆಗಳು:
ಈ ಬೃಹತ್ ಶಿಬಿರದಲ್ಲಿ ರಕ್ತದಾನದ ಜೊತೆಗೆ ಉಚಿತ ವೈದ್ಯಕೀಯ ತಪಾಸಣೆಗಳು ಹಾಗೂ ಇತರ ಸೇವೆಗಳು ಲಭ್ಯವಿರಲಿವೆ: ನೇತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ, ಗಾಲಿ ಕುರ್ಚಿ (ವೀಲ್ ಚೇರ್) ವಿತರಣೆ, ವಾಟರ್ ಬೆಡ್ ವಿತರಣೆ, ಸಾಂತ್ವನ ನಿಧಿ ವಿತರಣೆ.

Related posts

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!