27.4 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕೆ.ಪಿ.ಎಸ್ 1996-97 ನೇ ಸಾಲಿನ ಎಸ್ ಎಸ್ ಎಲ್ ಸಿ ಬ್ಯಾಚ್ ನ ಶಾಲಾ ಗೆಳೆಯರ ಸಮ್ಮಿಲನ ಕಾರ್ಯಕ್ರಮ

ಪುಂಜಾಲಕಟ್ಟೆ ಕೆ.ಪಿ.ಎಸ್ 1996-97 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಬ್ಯಾಚ್ ನ ಶಾಲಾ ಗೆಳೆಯರ ಸಮ್ಮಿಲನ ಕಾರ್ಯಕ್ರಮ ಇಂದು ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಈ ಬ್ಯಾಚ್ ನ ವತಿಯಿಂದ 4 ಫ್ಯಾನ್ ಗಳ ಕೊಡುಗೆಯನ್ನು ಸಂಸ್ಥೆಗೆ ನೀಡಲಾಯಿತು.ಈ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಹಿಂದಿ ಶಿಕ್ಷಕಿಯಾಗಿದ್ದು ಪ್ರಸ್ತುತ ಅದೇ ಶಾಲೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಕುಮುದಾ ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೆ.ಪಿ.ಎಸ್ ಪುಂಜಾಲಕಟ್ಟೆಯ ಉಪಪ್ರಾಂಶುಪಾಲರಾದ ಗಣೇಶ್.ಬಿ ಅಧ್ಯಕ್ಷತೆಯನ್ನು ವಹಿಸಿ ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಎಲ್ಲಾ ಹಿರಿಯ ವಿದ್ಯಾರ್ಥಿಗಳ ಸಹಕಾರವಿದ್ದಲ್ಲಿ ಈ ಸಂಸ್ಥೆ ರಾಜ್ಯದಲ್ಲಿಯೇ ಉತ್ತಮ ವಿದ್ಯಾ ಸಂಸ್ಥೆ ಎಂದು ಹೆಸರು ಗಳಿಸಬಹುದೆಂದು ಅಭಿಪ್ರಾಯಪಟ್ಟರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯರು ಕಾರ್ಯಕ್ರಮದ ಉದ್ಘಾಟನೆಗೈದು ಈ ಸಂಸ್ಥೆಯ ಒಂದು ಬ್ಯಾಚ್ ನ ಹಿರಿಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯಲ್ಲಿಯೇ ಮತ್ತೊಮ್ಮೆ ಸೇರಿದ್ದು ಒಳ್ಳೆಯ ಪ್ರಯತ್ನ, ಮುಂದಕ್ಕೆ ಎಲ್ಲಾ ಬ್ಯಾಚ್ ನವರೂ ಇದೇ ರೀತಿ ಒಟ್ಟಾಗುವಂತಾಗಲಿ ಎಂದು ಶುಭ ಹಾರೈಸಿದರು.

ಕೆ.ಪಿ.ಎಸ್ ಪುಂಜಾಲಕಟ್ಟೆಯ ಎಸ್ ಡಿ ಎಂ ಸಿ ಅಧ್ಯಕ್ಷ ದಿವಾಕರ ಶೆಟ್ಟಿ ಕಂಗಿತ್ತಿಲು ಸಂಸ್ಥೆಯ ಅಭಿವೃದ್ದಿಗೆ ಎಲ್ಲಾ ಹಿರಿಯ ವಿದ್ಯಾರ್ಥಿಗಳ ಸಹಕಾರವನ್ನು ಕೋರಿದರು.

ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಮಂಜಪ್ಪ ಮೂಲ್ಯ ಅತ್ತಾಜೆ, ಸಂಸ್ಥೆಯ ಶಿಕ್ಷಕರಾದ ಧರಣೇಂದ್ರ ಜೈನ್, ಎಸ್ ಡಿ ಎಂ ಸಿ ಸದಸ್ಯೆ ಶ್ರೀಮತಿ ಪ್ರೀತಿ, ಸಂಸ್ಥೆಯ ಪ್ರಥಮ‌ದರ್ಜೆ ಸಹಾಯಕ ರಂಗಮಯ್ಯ, ಹಿರಿಯ ವಿದ್ಯಾರ್ಥಿ ರಾಘವೇಂದ್ರ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳಾದ ಶ್ರೀಮತಿ ಸುಧಾ ಎಸ್ ಭಟ್ ಪ್ರಾರ್ಥನೆಗೈದರು. ಸತೀಶ್ ಆಚಾರ್ಯ ಬೆರ್ಕಳ ಸ್ವಾಗತಿಸಿದರು. ನಾರಾಯಣ್ ಧನ್ಯವಾದಗೈದು, ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ನೀಟ್ ಫಲಿತಾಂಶ : ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!