ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು, ಗುರುವಾಯನಕೆರೆಯಲ್ಲಿ ಅ.20 ರಂದು ಕಾಲೇಜು ಸಭಾಂಗಣದಲ್ಲಿ ಜ್ಞಾನದ ಅಧಿದೇವತೆ ತಾಯಿ ಶಾರದಾದೇವಿಯ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಿದ್ಯೆ, ಜ್ಞಾನ, ಸಂಸ್ಕಾರ ಹಾಗೂ ಸೃಜನಶೀಲತೆಯ ಬೆಳವಣಿಗೆಯಾಗಲಿ ಎಂಬ ಆಶಯದೊಂದಿಗೆ ತಾಯಿ ಶಾರದಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ದೀಪ ಬೆಳಗಿ, ತಾಯಿ ಶಾರದಾದೇವಿಯ ಕೃಪೆ ಎಲ್ಲ ವಿದ್ಯಾರ್ಥಿಗಳ ಮೇಲಿರಲಿ, ಅವರ ಶೈಕ್ಷಣಿಕ ಬದುಕು ಜ್ಞಾನ, ಯಶಸ್ಸು ಮತ್ತು ಸಾಧನೆಗಳಿಂದ ಬೆಳಗಲಿ ಎಂದು ಶುಭ ಹಾರೈಸಿದರು.

ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ಕೆ.ರೈ, ಖಜಾಂಚಿ ಕಾಶೀನಾಥ ಎಂ.ಕೆ., ಟ್ರಸ್ಟಿ ರೇಷ್ಮಾ ಸುಭಾಶ್ಚಂದ್ರ ಶೆಟ್ಟಿ, ಪ್ರಾಂಶುಪಾಲರಾದ ಬಾಲಕೃಷ್ಣ ನಾಯಕ್, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ, ಉಪ ಪ್ರಾಂಶುಪಾಲರಾದ ನೀಲಕಂಠ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ತಾಯಿ ಶಾರದೆಗೆ ನಮನ ಸಲ್ಲಿಸಿದರು.












