ಗುರುವಾಯನಕೆರೆ: ಎಕ್ಸೆಲ್ ಟೆಕ್ನೊ ಸ್ಕೂಲ್, ಗುರುವಾಯನಕೆರೆ, ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಎಕ್ಸೆಲ್ ಟ್ರೋಫಿ ಮಕ್ಕಳ ಅಂತರಶಾಲಾ ಚದುರಂಗ ಸ್ಪರ್ಧೆಯು ಅ. 25ರಂದು ಎಕ್ಸೆಲ್ ಟೆಕ್ನೊ ಸ್ಕೂಲ್‌ನಲ್ಲಿ ನಡೆಯಲಿದೆ.
ಸ್ಪರ್ಧೆಯು 7, 9, 11, 13 ಮತ್ತು 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಿಭಾಗಗಳಲ್ಲಿ ನಡೆಯಲಿದ್ದು, ಪ್ರತಿ ವಿಭಾಗದಲ್ಲಿ 10 ಬಾಲಕರಿಗೆ ಹಾಗೂ 7 ಬಾಲಕಿಯರಿಗೆ ಬಹುಮಾನ ನೀಡಲಾಗುವುದು. ಒಟ್ಟು ₹15,020 ನಗದು ಬಹುಮಾನಗಳನ್ನು ವಿತರಿಸಲಾಗುವುದು.
ಚದುರಂಗ ಕ್ರೀಡೆಯ ಮೂಲಕ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾರ್ಕಿಕ ಚಿಂತನೆ ಹಾಗೂ ಬೌದ್ಧಿಕ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9731230323 ಅಥವಾ 9606455769 ಸಂಖ್ಯೆಯನ್ನು ಸಂಪರ್ಕಿಸಬಹುದು. ನೋಂದಣಿಗೆ ಕೊನೆಯ ದಿನಾಂಕ – 24-10-2026 ನೋಂದಣಿ ಶುಲ್ಕ: 500












