25.7 C
ಪುತ್ತೂರು, ಬೆಳ್ತಂಗಡಿ
October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಭಾರಿ ಮಳೆಗೆ ಸೋಜಾ ಎಲೆಕ್ಟ್ರಾನಿಕ್ಸ್‌ಗೆ ನುಗ್ಗಿದ ಮಳೆನೀರು: ಮಾಲಕರ ಕಣ್ಣೀರು,ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿ

ಬೆಳ್ತಂಗಡಿ: ಇಂದು ಸುರಿದ ಭಾರಿ ಮಳೆಯಿಂದ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಜಲಾವೃತಗೊಂಡಿದ್ದು, ಮಳೆ ನೀರು ಸೋಜಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ಸ್ ಮಳಿಗೆಗೆ ನುಗ್ಗಿದ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಹಳೆಯ ಚರಂಡಿಗಳನ್ನು ಮುಚ್ಚಿರುವುದರಿಂದ ಮಳೆ ನೀರು ಸರಾಗವಾಗಿ ಹರಿದುಹೋಗಲು ಸಾಧ್ಯವಾಗದೆ, ರಸ್ತೆಯಲ್ಲೇ ನದಿಯಂತೆ ಹರಿದಿದೆ. ಈ ನೀರು ಸೋಜಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ಸ್ ಮಳಿಗೆಗೆ ನುಗ್ಗಿದ ಪರಿಣಾಮ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಮರದ ಪೀಠೋಪಕರಣಗಳು ಹಾಗೂ ಇತರ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ.

ಕಷ್ಟಪಟ್ಟು ಬೆಳೆಸಿದ ಸಂಸ್ಥೆಗೆ ಮಳೆ ನೀರಿನಿಂದ ಉಂಟಾದ ನಷ್ಟವನ್ನು ಕಂಡು ಸಂಸ್ಥೆಯ ಮಾಲಕರ ಅಲ್ಫೋನ್ಸ್ ಫ್ರಾಂಕೋ ಕಣ್ಣೀರಿಟ್ಟಿದ್ದಾರೆ. ಹೆದ್ದಾರಿ ಕಾಮಗಾರಿಯ ವೇಳೆ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಭಾರಿ ಮಳೆಯಿಂದಾಗಿ ಮಳಿಗೆಗೆ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿರುವುದರಿಂದ ವ್ಯಾಪಾರಸ್ಥರು ಆತಂಕಕ್ಕೊಳಗಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದುಹೋಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

Related posts

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!