25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಪ್ರಕರಣ ಮರು ತನಿಖೆ : ಎಸ್ಐಟಿ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ: ಸೌಜನ್ಯ ತಾಯಿ ಕುಸುಮಾವತಿ ಹಾಜರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಮರುತನಿಖೆ ಆದೇಶದಂತೆ ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು. ಇದೀಗ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿ ಬೆಳ್ತಂಗಡಿಗೆ ಆಗಮಿಸಿದ್ದಾರೆ.

ಮಂಗಳೂರು ಎಸ್ಐಟಿ ಕಚೇರಿಯಿಂದ ಸೌಜನ್ಯ ಪ್ರಕರಣದ ತನಿಖಾಧಿಕಾರಿ ಲೋಕೇಶ್.ಪಿ.ಜಗಲಾಸರ್ ಐಪಿಎಸ್ ಮತ್ತು ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದ ತಂಡ ಅ.23 ರಂದು ಸಂಜೆ 4:35ರ ವೇಳೆಗೆ ಪ್ರೀಂಟರ್, ಲ್ಯಾಪ್ ಟಾಪ್ ಸಮೇತ ಬೆಳ್ತಂಗಡಿ ಜೆ.ಎಮ್.ಎಫ್.ಸಿ ನ್ಯಾಯಾಲಯಕ್ಕೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ರವರನ್ನು ಕರೆದುಕೊಂಡು ಬಂದು ಇಬ್ಬರು ಸರಕಾರಿ ಪಂಚರ ಸಮಕ್ಷಮದಲ್ಲಿ ರಕ್ತದ ಮಾದರಿಯನ್ನು (ಡಿಎನ್ಎ) ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಮುಂದೆ ಸಂಗ್ರಹಿಸಿದ್ದಾರೆ.

ಬೆಳ್ತಂಗಡಿ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯರಾದ ಅಶಾಲತಾ ನೇತೃತ್ವದಲ್ಲಿ ಕುಸುಮಾವತಿ ಅವರ ರಕ್ತದ ಮಾದರಿಯನ್ನು (ಡಿಎನ್ಎ) ಸಂಗ್ರಹಿಸಿ ಬಳಿಕ ಎಸ್ಐಟಿ ಆಧಿಕಾರಿಗಳು ಎಫ್ಎಸ್ಎಲ್ ಗೆ ಕಳುಹಿಸಿ ಡಿಎನ್ಎ ವರದಿಯನ್ನು ಪಡೆಯಲಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!