ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿನಿ ಸ್ತವ್ಯ ಆರ್. ಶೆಟ್ಟಿ ಅವರು ಕೆಪಿಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರಾದ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ, ವಿಜ್ಞಾನ ಶಿಕ್ಷಕಿ ನಯನ ಅವರ ನೇತೃತ್ವ ಹಾಗೂ ಸಹಕಾರದೊಂದಿಗೆ ವಿದ್ಯಾರ್ಥಿನಿ ಈ ಸಾಧನೆಗೈದಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.













