October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಬೆಳ್ತಂಗಡಿ ಪಿ. ಎಂ ಶ್ರೀ ಶಾಲಾ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬೆಳ್ತಂಗಡಿ ಇದರ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರ ವತಿಯಿಂದ ಅ. 22ರಂದು ಬೆಳ್ತಂಗಡಿಯ ಪಿಎಂ ಶ್ರೀ ಕೆ.ಪಿ.ಎಸ್ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಅಭಿಯಾನದಲ್ಲಿ ಶಾಲೆಯ ಆವರಣ ಹಾಗೂ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲಾಯಿತು. ಒಟ್ಟು ಒಂಬತ್ತು ಮಂದಿ ಸ್ವಯಂಸೇವಕರು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶಾಲೆಯ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಸುವಲ್ಲಿ ಮಹತ್ವದ ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಜ್ಯೋತಿ, ಪ್ರೇಮಲತಾ, ಸುಮಲತಾ, ಪೂರ್ಣಿಮಾ, ಬೇಬಿ, ಜಿ. ಮಮತ, ಸೀತಾ, ಚಂದ್ರಶೇಖರ ಹಾಗೂ ಜಗದೀಶ್ ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಜಿ. ರವಿ, ಬೆಳ್ತಂಗಡಿ ಬಿ ಒಕ್ಕೂಟದ ಅಧ್ಯಕ್ಷರಾದ ಚರಣ್ ಕುಮಾರ್, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ

ಶಾಲೆಯ ಆವರಣ ಮತ್ತು ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯಕರ ಹಾಗೂ ಸ್ವಚ್ಛ ಕಲಿಕಾ ವಾತಾವರಣವನ್ನು ಕಲ್ಪಿಸಲು ಸಹಕರಿಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರ ಕಾರ್ಯಕ್ಕೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಸಮಾಜಮುಖಿ ಶ್ರಮದಾನ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದರ ಜೊತೆಗೆ ಸಮಾಜಸೇವೆಯ ಮನೋಭಾವವನ್ನು ಬೆಳೆಸಲು ಸಹಕಾರಿಯಾಗಿವೆ.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಕೆನರಾ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾಗಿ ಡಾ. ಮಹೇಶ್ ಪ್ರಸನ್ನ ಕೆ.

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya
error: Content is protected !!