25.7 C
ಪುತ್ತೂರು, ಬೆಳ್ತಂಗಡಿ
October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ: ಉಡುಪಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಬಳಕೆಗೆ ಹಸ್ತಾಂತರ

ಉಜಿರೆ : ಕರ್ನಾಟಕ ಬ್ಯಾಂಕ್ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಫೋರ್ಸ್ ಮೋಟರ್ಸ್ ಲಿಮಿಟೆಡ್ ಕಂಪನಿಯ ತೂಫಾನ್ ಮಾದರಿಯ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಂ. ಭಟ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹಾಗೂ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ , ಯೋಜನಾ ನಿರ್ದೇಶಕ ಡಿ. ಶ್ರೇಯಸ್ ಕುಮಾರ್ ಅವರ ಸಮ್ಮುಖದಲ್ಲಿ ಆಂಬುಲೆನ್ಸ್ ಅನ್ನು ಹಸ್ತಾಂತರಿಸಿದರು.

ನಂತರ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರ ಉಪಸ್ಥಿತಿಯಲ್ಲಿ ಆಂಬುಲೆನ್ಸ್ ಅನ್ನು ಉಡುಪಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಬಳಕೆಗಾಗಿ ಹಸ್ತಾಂತರಿಸಿ, ಈ ಕೊಡುಗೆಯು ಆಸ್ಪತ್ರೆಯ ಆರೋಗ್ಯ ಸೇವೆಗಳಿಗೆ ಪೂರಕವಾಗಿದ್ದು, ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಸುರಕ್ಷಿತವಾಗಿ ಸಾಗಿಸಲು ಹಾಗೂ ಅಗತ್ಯ ವೈದ್ಯಕೀಯ ನೆರವು ಒದಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುಟುಂಬದ ಸದಸ್ಯರೂ ಸೇರಿದಂತೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಹಣಕಾಸು ಅಧಿಕಾರಿ ಅರವಿಂದ್ ಪಿ., ವಾಹನಗಳ ಸಂಯೋಜಕ ನಿಶಿತ್ ಕುಮಾರ್ , ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕ ಡಾ. ಜಯಕೃಷ್ಣ ನಾಯಕ್ ಹಾಗೂ ವ್ಯವಸ್ಥಾಪಕ ರಮಾನಂದ ಕಾರಂತ್ ಕೆ. ಉಪಸ್ಥಿತರಿದ್ದರು.

ಕರ್ನಾಟಕ ಬ್ಯಾಂಕ್‌ನ ಮಂಗಳೂರು ಪ್ರಧಾನ ಕಚೇರಿಯ ಸಹಾಯಕ ಮಹಾಪ್ರಬಂಧಕ ರಮೇಶ್ ವೈದ್ಯ, ಉಡುಪಿ ಪ್ರಾದೇಶಿಕ ಕಚೇರಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹಾಗೂ ಮುಖ್ಯ ವ್ಯವಸ್ಥಾಪಕಿ ಪಲ್ಲವಿ ಟಿ.ಎಸ್., ಉಡುಪಿ ಕಾರ್‌ಸ್ಟ್ರೀಟ್ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಂ. ರಾವ್ ಸೇರಿದಂತೆ ಬ್ಯಾಂಕಿನ ಅಧಿಕಾರಿಗಳು ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಘವೇಂದ್ರ ಎಂ. ಭಟ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya
error: Content is protected !!