October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಹದಾರ್ಢ್ಯ ಸ್ಪರ್ಧೆ : ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಸಮಗ್ರ ರನ್ನರ್ಸ್ ಅಪ್ ಪ್ರಶಸ್ತಿ: ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಸ್ಪರ್ಧೆಗೆ ತಬ್ಶೀರ್ ಆಯ್ಕೆ

ಮಡಂತ್ಯಾರು: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್‌ಕಾಲೇಜು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವು ನಾಲ್ಕು ಪದಕಗಳನ್ನು ಗೆಲ್ಲುವ ಮೂಲಕ ಸಮಗ್ರ ರನ್ನರ್ಸ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಕಾಲೇಜಿನ ಸ್ಪರ್ಧಾರ್ಥಿಗಳಾದ ಶಿಹಾಬುದ್ದೀನ್ ತಬ್ಶೀರ್ ಅವರು 80 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ, ಶ್ರೇಯಸ್ ಶೆಟ್ಟಿ ಅವರು 90 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ, ಮನೀಶ್ ಪಿಂಟೋ ಅವರು 90 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಹಾಗೂ ಜಾಹ್ನು ಪ್ರಕಾಶ್ ಅವರು 85 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಚಿನ್ನದ ಪದಕ ವಿಜೇತ ಶಿಹಾಬುದ್ದೀನ್ ತಬ್ಶೀರ್ ಅವರು ಮುಂಬರುವ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!