ನಾವೂರು : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ನಾವೂರು ಸಂಸ್ಥೆಯ 2009-2010ನೇ (2009-2010) ಸಾಲಿನ ಬ್ಯಾಚ್ ವಿದ್ಯಾರ್ಥಿಗಳು ಆಯೋಜಿಸಲಿರುವ “ಗುರುವಂದನಾ ಮತ್ತು ಸ್ನೇಹ ಸಮ್ಮಿಲನ” ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ ಹಾಗೂ ಉದ್ಘಾಟನಾ ಸಮಾರಂಭವು ಶಾಲಾ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

16 ವರ್ಷಗಳ ಸುದೀರ್ಘ ಅವಧಿಯ ನಂತರ ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ತಮಗೆ ಅಕ್ಷರ ಕಲಿಸಿದ ಗುರುಗಳಿಗೆ ಗೌರವ ಸಲ್ಲಿಸುವ ಹಾಗೂ ಬಾಲ್ಯದ ನೆನಪುಗಳನ್ನು ಮೆಲಕು ಹಾಕುವ ಉದ್ದೇಶದಿಂದ ಈ ಸಮ್ಮಿಲನವನ್ನು ಹಮ್ಮಿಕೊಳ್ಳಲಾಗಿದೆ.
ಈ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ (SDMC) ಅಧ್ಯಕ್ಷ ಡಾ. ಪ್ರದೀಪ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ರೋಹಿಣಿ , ಪ್ರೌಢಶಾಲೆಯ ಉಪಾಧ್ಯಕ್ಷ ಉಮೇಶ್ ಪ್ರಭು ಹಾಗೂ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಗಣೇಶ್ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಭಿತ್ತಿಪತ್ರವನ್ನು ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಎಲ್ಲಾ ಗೌರವಾನ್ವಿತ ಶಿಕ್ಷಕ-ಶಿಕ್ಷಕಿಯರು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ 2009-10ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿ ಬಳಗ ಉಪಸ್ಥಿತರಿದ್ದರು.












