27.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಸಂಪನ್ನಗೊಂಡ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಉಜಿರೆ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಉಜಿರೆ, ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 38 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅ. 23 ರಂದು ಸಂಜೀವಿನಿ ಕಟ್ಟಡ ಗ್ರಾಮ ಪಂಚಾಯತ್ ಉಜಿರೆಯಲ್ಲಿ ನಡೆಯಿತು.

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ರಘುರಾಮ ಶೆಟ್ಟಿ ”ಸಾಧನಾ'” ರವರು ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕನ್ಯಾಡಿ ಸೇವಾಭಾರತಿಯ ಟ್ರಸ್ಟಿ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ( ನಿ.)ದ ಸಿಇಒ ಶ್ರೀಮತಿ ಸ್ವರ್ಣಗೌರಿ ಮಾತನಾಡಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತ ವಿದ್ಯೆ ಎಂದಿಗೂ ನಮಗೆ ಶಾಶ್ವತ ಮಹಿಳೆಯರು ಯಾವತ್ತಿಗೂ ಇನ್ನೊಬ್ಬರಿಗೆ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಟೈಲರಿಂಗ್ ತರಬೇತುದಾರರಾದ ಲಲಿತಾರವರು ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ವತಿಯಿಂದ ಲಲಿತಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದು. ಇದನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ರಘುರಾಮ ಶೆಟ್ಟಿ ಸಾಧನಾ ರವರು ಹಸ್ತಾಂತರಿಸಿದರು. ಶಿಬಿರಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಉಜಿರೆ ಗ್ರಾಮ ಪಂಚಾಯತ್, ಆಡಳಿತಾಧಿಕಾರಿಗಳು ಮಹಾವೀರ ಶೇಬಣ್ಣವರ, ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ದ ಅಧ್ಯಕ್ಷರಾದ ವಿನುತಾ ರಜತ್ ಗೌಡ, NRLM ಬೆಳ್ತಂಗಡಿ ತಾಲ್ಲೂಕು ವ್ಯವಸ್ಥಾಪಕರಾದ ಪ್ರತಿಮಾ, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 50 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಶಾಶ್ವಿತ ಸ್ವಾಗತಿಸಿ, ಸಂಧ್ಯಾ ಎಂ.ಬಿ.ಕೆ ನಿರೂಪಿಸಿ, ಭಾಗೀರಥಿ ಧನ್ಯವಾದವಿತ್ತರು.

Related posts

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಆ.23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’

Suddi Udaya
error: Content is protected !!