26.1 C
ಪುತ್ತೂರು, ಬೆಳ್ತಂಗಡಿ
October 25, 2026
Uncategorizedಅಪಘಾತವರದಿ

ವೇಣೂರು: ಮೂಡುಕೋಡಿಯಲ್ಲಿ ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ ರಾಜೇಶ್ ಪೂಜಾರಿ ಮೂಲಕ ಮನೆ ದುರಸ್ತಿ, ವಿದ್ಯುತ್ ಕಂಬಗಳ ಮರುಸ್ಥಾಪನೆ

ವೇಣೂರು: ಇತ್ತೀಚೆಗೆ ವೇಣೂರು ಸಮೀಪದ ಮೂಡುಕೋಡಿ ಪರಿಸರದಲ್ಲಿ ಸುರಿದ ಗಾಳಿ ಮಳೆಗೆ ಮಲ್ಲಿಕಾ ಅವರ ಮನೆಗೆ ಮರ ಬಿದ್ದು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿತ್ತು.

ವಿಷಯ ತಿಳಿದ ಕೂಡಲೇ ವೇಣೂರು ಪಂಚಾಯತ್ ವ್ಯಾಪ್ತಿಯ ರಾಜೇಶ್ ಪೂಜಾರಿ ಮೂಡುಕೋಡಿ ಅವರು ಶಾಸಕ ಹರೀಶ್ ಪೂಂಜ ಅವರ ಗಮನಕ್ಕೆ ತಂದರು.ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಅವರು ರಾಜೇಶ್ ಪೂಜಾರಿ ಅವರ ಮೂಲಕ ಬಿದ್ದ ಮರಗಳನ್ನು ತೆರವುಗೊಳಿಸಿ, ಹಾನಿಗೊಳಗಾದ ಮನೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಂಡರು.

ಅಲ್ಲದೆ, ಇದೇ ಪರಿಸರದಲ್ಲಿ ನಾಲ್ಕೈದು ವಿದ್ಯುತ್ ಕಂಬಗಳು ಬಿದ್ದಿದ್ದು, ಅವುಗಳನ್ನು ಕೂಡ ಸರಿಪಡಿಸಲು ನೆರವಾದರು.ಸಂಕಷ್ಟದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ನೆರವು ನೀಡಿದ ಶಾಸಕ ಹರೀಶ್ ಪೂಂಜ ಹಾಗೂ ರಾಜೇಶ್ ಪೂಜಾರಿ ಮೂಡುಕೋಡಿ ಅವರ ಮಾನವೀಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆರವು ನೀಡಿದ ಶಾಸಕರಿಗೆ ಮಲ್ಲಿಕಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya
error: Content is protected !!