27.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೇರಣಾ ಉಪನ್ಯಾಸ ಹಾಗೂ ಡಾ. ರಜತಾ ಪಿ. ಶೆಟ್ಟಿ ಅವರಿಗೆ ಸನ್ಮಾನ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಅ. 23 ರಂದು ಪ್ರೇರಣಾ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಕರ ಸಂಘದ ಮಂಗಳೂರು ವಿಭಾಗದಿಂದ ನೀಡಲಾಗುವ ಅತ್ಯುತ್ತಮ ಗ್ರಂಥಪಾಲಕಿ ಪ್ರಶಸ್ತಿ ಕುರಿತು ಡಾ. ರಜತಾ ಪಿ. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅವರು “ಸಂದರ್ಶನದಲ್ಲಿ ಯಶಸ್ಸು ಸಾಧಿಸಲು ಪರಿಣಾಮಕಾರಿ ಆಂಗ್ಲ ಸಂವಹನ ಕೌಶಲಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯ ಸಂವಹನ ಕೌಶಲಗಳ ಮಹತ್ವ ಹಾಗೂ ಸಂದರ್ಶನವನ್ನು ಆತ್ಮವಿಶ್ವಾಸದಿಂದ ಎದುರಿಸುವ ಕುರಿತು ಮಾರ್ಗದರ್ಶನ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅಧ್ಯಕ್ಷೀಯ ಭಾಷಣ ಮಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಬೆಳವಣಿಗೆಯಲ್ಲಿ ಸಂವಹನ ಕೌಶಲಗಳ ಮಹತ್ವವನ್ನು ತಿಳಿಸಿ, ಆಂಗ್ಲ ಭಾಷೆಯ ಉಪಯೋಗಕ್ಕೆ ಒತ್ತು ನೀಡುವಂತೆ ತಿಳಿಸಿದರು.

ಶಾಲೆಯ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸ್ಪೂರ್ತಿ ನಿರೂಪಿಸಿದರು, ಸೃಜನ ಸ್ವಾಗತಿಸಿದರು, ಪೂರ್ವಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು ಹಾಗೂ ಆದ್ಯತ್ ಜೈನ್ ವಂದನಾರ್ಪಣೆಗೈದರು.

Related posts

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya
error: Content is protected !!