32.8 C
ಪುತ್ತೂರು, ಬೆಳ್ತಂಗಡಿ
October 25, 2026
Uncategorizedಅಭಿನಂದನೆಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟಿನಲ್ಲಿ ನೂತನ ಪೆಟ್ರೋಲ್ ಪಂಪ್ ಸ್ಥಾಪನೆಗೆ ಶಿಲಾನ್ಯಾಸ

ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಇಂದಬೆಟ್ಟಿನಲ್ಲಿ (ಮಂಗಳೂರು ರಿಪೈನರೀಸ್) ಆ್ಯಂಡ್ ಪೆಟ್ರೋ ಕೆಮಿಕಲ್ಸ್ (ಎಂಆರ್‌ಪಿಎಲ್) ರವರ ನೂತನ ಪೆಟ್ರೋಲ್ ಪಂಪ್ ಸ್ಥಾಪನೆ ಇದರ ಶಿಲಾನ್ಯಾಸ ಸಮಾರಂಭವು ಅ.25ರಂದು ನಡೆಯಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕರಾದ ಹರೀಶ್ ಪೂಂಜ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಭಾಗವಹಿಸಿದರು. ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಆನಂದ ಗೌಡ, ನಿರ್ದೇಶಕರುಗಳು ,ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಉಪಸ್ಥಿತರಿದ್ದರು.

ಶಾಖಾ ವ್ಯವಸ್ಥಾಪಕಿ ಶ್ರೀಮತಿ ಅನಿತಾ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಸಿಬ್ಬಂದಿ ರಮಾನಂದ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ವಿನಯಚಂದ್ರ ಎಸ್. ಧನ್ಯವಾದವಿತ್ತರು. ಕಾರ್ಯಕ್ರಮದ ಯಶಸ್ವಿಗೆ ಸಂಘದ ಸಿಬ್ಬಂದಿಗಳು ಸಹಕರಿಸಿದರು.

Related posts

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!