24.8 C
ಪುತ್ತೂರು, ಬೆಳ್ತಂಗಡಿ
October 26, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ಆರೋಪ: ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ ಮೇಲೆ ಪ್ರಕರಣ ದಾಖಲು

ವೇಣೂರು: ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ಯುವತಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಸದ್ರಿಯವರು ಅ.24 ರಂದು ಮಧ್ಯಾಹ್ನ, ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ಬಂದ ಪ್ರಕರಣದ ಆರೋಪಿತ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61ವ) ಎಂಬಾತನು ದ್ವಿಚಕ್ರದಲ್ಲಿ ಬಂದು ಪಿರ್ಯಾದಿದಾರರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡುತ್ತಾ, ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2026, ಕಲಂ: 75(1)(ii), 75(1)(iv), 79 ಬಿ.ಎನ್.‌ಎಸ್‌ 2023 ಮತ್ತು ಕಲಂ: 3(1)(r), 3(1)(w)(ii)̧ 3(2)(va) The SC & ST (Prevention of Atrocities) Amendment) Act 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸದ್ರಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya
error: Content is protected !!