ವೇಣೂರು: ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ಥ ಯುವತಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಸದ್ರಿಯವರು ಅ.24 ರಂದು ಮಧ್ಯಾಹ್ನ, ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ಬಂದ ಪ್ರಕರಣದ ಆರೋಪಿತ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61ವ) ಎಂಬಾತನು ದ್ವಿಚಕ್ರದಲ್ಲಿ ಬಂದು ಪಿರ್ಯಾದಿದಾರರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡುತ್ತಾ, ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2026, ಕಲಂ: 75(1)(ii), 75(1)(iv), 79 ಬಿ.ಎನ್.ಎಸ್ 2023 ಮತ್ತು ಕಲಂ: 3(1)(r), 3(1)(w)(ii)̧ 3(2)(va) The SC & ST (Prevention of Atrocities) Amendment) Act 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸದ್ರಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.













