26.6 C
ಪುತ್ತೂರು, ಬೆಳ್ತಂಗಡಿ
October 26, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನ.8: ಬಳಂಜದಲ್ಲಿ ಕೆ. ವಸಂತ ಸಾಲಿಯಾನ್ – ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಹುಟ್ಟೂರ ಪೌರ ಸನ್ಮಾನ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ:ಬಳಂಜ ಶಾಲೆಯ ಅಮೃತ ಮಹೋತ್ಸವ ಸಮಾರೋಪ, ಅಮೃತ ಸಿಂಧು ಬಿಡುಗಡೆ-ಅದ್ದೂರಿ ಮೆರವಣಿಗೆ, ಸಾಂಸ್ಕೃತಿಕ ವೈಭವ

ಬಳಂಜ: ಕಳೆದ ಐದಾರು ದಶಕಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲಾ, ಕ್ರೀಡೆ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಹುಟ್ಟೂರಿನ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿರುವ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹೆಚ್. ಧರ್ಣಪ್ಪ ಪೂಜಾರಿ ಅವರಿಗೆ ನವೆಂಬರ್ 8ರಂದು ಹುಟ್ಟೂರ ಪೌರ ಸನ್ಮಾನ ನಡೆಯಲಿದೆ.

ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮವು ಉತ್ತಮ ರೀತಿಯಲ್ಲಿ ನಡೆಯಲಿ ಹಾಗೂ ಎಲ್ಲರ ಸಹಕಾರದಿಂದ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಬಳಂಜ ಶಾಲೆಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದೊಂದಿಗೆ ಈ ಇಬ್ಬರು ಮಹಾನ್ ಸಾಧಕರಿಗೆ ಪೌರ ಸನ್ಮಾನ, ಅಮೃತ ಸಿಂಧು ಬಿಡುಗಡೆ ಸೇರಿದಂತೆ ಅಮೃತ ಮಹೋತ್ಸವ ಸಂಚಾಲಕ ಅಶ್ವಥ್ ಹೆಗ್ಡೆ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ನಡೆಯುತ್ತಿವೆ.

ಈ ಸಂದರ್ಭದಲ್ಲಿ ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ಪೂಜ್ಯ ಖಾವಂದರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಅವರಿಗೆ ಕಾರ್ಯಕ್ರಮದ ಆಮಂತ್ರಣ ನೀಡಲಾಯಿತು.ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿ.ಕೆ., ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತದಾರ ಬಿ. ಶೀತಲ್ ಪಡಿವಾಳ್, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್, ಶಿಕ್ಷಣ ಟ್ರಸ್ಟ್ ಸದಸ್ಯ ಪ್ರವೀಣ್ ಕುಮಾರ್ ಎಚ್.ಎಸ್., ಬಳಂಜ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ವೈ. ಚಂದ್ರಮ, ಸಮಿತಿ ಪ್ರಮುಖರಾದ ದಿನೇಶ್ ಪಿ.ಕೆ., ದೀಪಕ್ ಹೆಚ್.ಡಿ., ಚೇತನಾ ಜೈನ್, ಮಂಗಳ ದೇವಾಡಿಗ, ಅಶ್ರಫ್ ಬಳಂಜ, ಅಬುಬಕ್ಕರ್, ಅಶ್ವಿನ್ ಬಿ.ಕೆ., ಡೀಕಯ್ಯ ಕುಲಾಲ್ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಬಳಂಜ–ನಾಲ್ಕೂರಿನ ಯುವಕರಿಂದ ಅಮರನಾಥ ಯಾತ್ರೆ ಪವಿತ್ರ ಹಿಮಲಿಂಗ ದರ್ಶನದೊಂದಿಗೆ ವೈಷ್ಣೋದೇವಿ, ಶಿವಖೋರಿ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!