ಶಿಬರಾಜೆ ಪಾದೆ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ (ರಿ.), ಶಿಬರಾಜೆ ಪಾದೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರ ಸಮ್ಮುಖದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಗೌಡ ನೆಕ್ಕಾರಜೆ, ಕಾರ್ಯದರ್ಶಿಯಾಗಿ ರಾಜೇಶ್ ಶೆಟ್ಟಿ ಕುಟ್ರುಗ, ಕೋಶಾಧಿಕಾರಿಯಾಗಿ ಹರೀಶ್ ಗೌಡ ವಲಗುಡ್ಡೆ, ಉಪಾಧ್ಯಕ್ಷರಾಗಿ ಸಂಜೀವ ದೇವಾಡಿಗ ಬೆರ್ಬಲ್ಲಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಮಹೇಶ್ ನೇಲ್ಯಪಲ್ಕೆ ಅವರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಮುಂದಿನ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ಮುನ್ನಡೆಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಸಂಘಟನೆಯ ಅಭಿವೃದ್ಧಿ ಹಾಗೂ ಗ್ರಾಮದ ಸರ್ವತೋಮುಖ ಪ್ರಗತಿಗೆ ಒಗ್ಗಟ್ಟಿನಿಂದ ಶ್ರಮಿಸುವ ವಿಶ್ವಾಸವನ್ನು ವ್ಯಕ್ತಪಡಿಸಲಾಯಿತು.
ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಸಮಿತಿಯ ಸದಸ್ಯರು ಶುಭಾಶಯಗಳನ್ನು ಕೋರಿದರು.













