
ಉಜಿರೆ: 2026-27ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ ಹತ್ತನೇ ತರಗತಿಯ ವಿದ್ಯಾರ್ಥಿನಿ ಅನಿಶಾ ಅವರು ಚಕ್ರ ಎಸೆತ (Discus Throw) ಹಾಗೂ ಗುಂಡು ಎಸೆತ (Shot Put) ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಎರಡೂ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅನಿಶಾ ಅವರು ತಮ್ಮ ಕ್ರೀಡಾ ಸಾಮರ್ಥ್ಯ, ಶಕ್ತಿ, ಏಕಾಗ್ರತೆ ಹಾಗೂ ನಿರಂತರ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ.
ಅನಿಶಾ ಅವರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಅನಿಶಾ ಅವರು ಕ್ರೀಡಾಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಿ ಶಾಲೆ ಹಾಗೂ ನಾಡಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.













