ಬೆಳ್ತಂಗಡಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿಯ ಸಹಭಾಗಿತ್ವದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅ.26 ರಂದು ನಡೆಯಿತು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮುಖ್ಯಸ್ಥ, ಸಹಪ್ರಾಧ್ಯಾಪಕ ಡಾ.ಹಂಪೇಶ್ ಕೆ.ಎಸ್. ಪ್ರಧಾನ ಭಾಷಣ ಮಾಡಿದರು. ತಹಶೀಲ್ದಾರ್ ಎಸ್.ಎನ್.ನರಗುಂದ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಭವಾನಿಶಂಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಎನ್.ಎಸ್., ಪ.ಪಂ.ಮುಖ್ಯಾಧಿಕಾರಿ ರಾಜೇಶ್ ಕೆ., ವಿವಿಧ ಇಲಾಖಾಧಿಕಾರಿಗಳು, ಸಮುದಾಯ, ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ವಸತಿ ನಿಲಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯೋಪಾಧ್ಯಯ ಮುರಳೀಧರ್ ಸ್ವಾಗತಿಸಿ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಅಂಕಾಜೆ ವಂದಿಸಿ, ವಸತಿ ನಿಯಲ ಮೇಲ್ವಿಚಾರಕಿ ಹೇಮಲತಾ ನಿರೂಪಿಸಿದರು.













