31.4 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೆರಿಗೆ ಪಾವತಿದಾರರ ಮತ್ತು ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತೆರಿಗೆ ಪಾವತಿದಾರರ ಮತ್ತು ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಇದರ ಉದ್ಘಾಟನಾ ಸಮಾರಂಭವು ಅ.24ರಂದು ಬೆಳ್ತಂಗಡಿಯ ಮೆಸ್ಕಾಂ ರಸ್ತೆಯ ಶ್ರೀ ಅಯ್ಯಪ್ಪ ದೇವಸ್ಥಾನದ ಸಮೀಪವಿರುವ ಮಂಜುನಾಥ ಸ್ವಾಮಿ ಕಲಾಭವನದ ಪಿನಾಕಿ ಹಾಲ್‌ನಲ್ಲಿ ನೆರವೇರಿತು.

ಡಿ.ಕೆ. ಗ್ರೂಪ್ ಆಫ್ ಕಂಪನೀಸ್‌ನ ಸ್ಥಾಪಕರು ಹಾಗೂ ಡಿ.ಕೆ. ಬಿಸಿನೆಸ್ ಅಂಡ್ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಆಲ್ವಿನ್ ಜೆೋಯಲ್ ನೊರೊನ್ಹಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಹಕಾರದ ತತ್ವವು ಜನರನ್ನು ಒಗ್ಗೂಡಿಸುವುದರ ಜೊತೆಗೆ ಪರಸ್ಪರ ವಿಶ್ವಾಸ, ಜವಾಬ್ದಾರಿ ಮತ್ತು ಆರ್ಥಿಕ ಸ್ವಾವಲಂಬನೆಯನ್ನು ಬೆಳೆಸುವ ಶಕ್ತಿಯನ್ನು ಹೊಂದಿದೆ. ಸಹಕಾರಿ ಸಂಸ್ಥೆಯ ಯಶಸ್ಸು ಅದರ ಕಟ್ಟಡ ಅಥವಾ ಬಂಡವಾಳದಿಂದ ಮಾತ್ರ ನಿರ್ಧಾರವಾಗುವುದಿಲ್ಲ; ಸದಸ್ಯರಿಗೆ ನೀಡುವ ಸೇವೆ, ಪಾರದರ್ಶಕ ಆಡಳಿತ ಮತ್ತು ಜನರ ವಿಶ್ವಾಸವೇ ಅದರ ನಿಜವಾದ ಶಕ್ತಿಯಾಗಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ ಸಹಕಾರಿ ಕ್ಷೇತ್ರವು ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಯೊಂದಿಗೆ ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಜನಜೀವನದ ಬೆಳವಣಿಗೆಗೂ ಪೂರಕವಾಗಬೇಕು. ವಿಶೇಷವಾಗಿ ಸಹಕಾರಿ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಸಾಧ್ಯವಾದಷ್ಟು ತುಳು ಭಾಷೆಯನ್ನು ಬಳಸುವ ಮೂಲಕ ತುಳು ಭಾಷೆಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳ್ತಂಗಡಿಯ ರಕ್ಷಿತ್ ಶಿವರಾಮ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಡಿ.ಕೆ. ಗ್ರೂಪ್ ಆಫ್ ಕಂಪನೀಸ್‌ನ ವ್ಯವಸ್ಥಾಪಕ ನಿರ್ದೇಶಕ ಎಸ್. ಸತೀಶ್ ನಾಯಕ್, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಒಡಿಯೂರು ಸಹಕಾರ ಸಂಘದ ನಿರ್ದೇಶಕ ಭವಾನಿ ಶಂಕರ್, ಡಿ.ಕೆ. ಗ್ರೂಪ್ ಆಫ್ ಕಂಪನೀಸ್‌ನ ಮ್ಯಾನೇಜಿಂಗ್ ಪಾರ್ಟ್ನರ್‌ಗಳಾದ ಶ್ರೀಮತಿ ಸೌದಾ ಫಾರೂಕ್ ಮತ್ತು ಫಾರೂಕ್, ಹಾಗೂ ಬೆಳ್ತಂಗಡಿ ತೆರಿಗೆ ಪಾವತಿದಾರರ ಮತ್ತು ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮ್ಯಾನೇಜಿಂಗ್ ಪಾರ್ಟ್ನರ್ ಶ್ರೀಧರ್ ಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸಮಾರಂಭದ ಅಂಗವಾಗಿ ಸಮಾಜಕ್ಕೆ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಸಾಧಕ ಪ್ರಭಾಕರ ಮಯ್ಯ ಸುರ್ಯ (ಕೃಷಿಕರು) ಹಾಗೂ ಡಾ. ವೇಣುಗೋಪಾಲ ಶರ್ಮ ಅವರನ್ನು ಸನ್ಮಾನಿಸಲಾಯಿತು.

ಸೊಸೈಟಿಯ ಅಧ್ಯಕ್ಷ ಬದ್ರುದ್ದೀನ್ ಹಾಗೂ ಉಪಾಧ್ಯಕ್ಷ ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಮಾರಂಭದಲ್ಲಿ ನಿರ್ದೇಶಕರಾದ ಬಿ.ವೈ. ಯಶೋಧರ ಸಾಲಿಯಾನ್, ಮುಮ್ತಾಝ್ ಬೇಗಂ, ದೇವಕಿ. ಕೆ., ನಝೀರ್ ಮೋಹಮ್ಮದ್, ಸಫ್ವಾನ್ ಎಸ್., ಸುಂದರ ಎನ್.ಕೆ., ಎಂ. ಜಯಂತಿ, ಸಂಜೀವ ಆರ್., ಗೋಪಾಲ. ಬಿ., ಕೃಷ್ಣ ಕುಮಾರ್, ಶೇಖ್ ಇಬ್ರಾಹಿಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಾಗೂ ವಿವಿದ ಸಹಕಾರ ಸಂಘಗಳ ದೀಪಕ್ ಮಲ್ಲಿಕಟ್ಟೆ , ಸುಷಂತ್ ಪಂಪುವೆಲ್, ಟೆಲ್ಸನ್ , ಪ್ಲಾವಿಯ ನೊರೋನ್ಹ , ಸೇರಿದಂತೆ ಹಲವು ಗಣ್ಯರ ಉಪಸ್ಥಿತರಿದ್ದರು.

Related posts

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!