31.4 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ಉತ್ತೀರ್ಣ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 2026ರ ಆಗಸ್ಟ್ 29ರಿಂದ 31ರವರೆಗೆ ನಡೆದ ತೃತೀಯ ಸೋಪಾನ (Thrithiya Sopana) ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ ಐವರು ಗೈಡ್ಸ್ ವಿದ್ಯಾರ್ಥಿನಿಯರು ಭಾಗವಹಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ವಿದ್ಯಾರ್ಥಿನಿಯರಾದ ಅದಿತಿ, ಮಾನ್ವಿ ಜಿ., ಚಿತ್ತಾರ, ಪವನಾ ಹಾಗೂ ಶಿಖಾ ಶಿವ ಪಿ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವದ ಗುಣ, ಸ್ವಾವಲಂಬನೆ ಹಾಗೂ ಸಮಾಜಸೇವೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇಂತಹ ಸಾಧನೆಗಳನ್ನು ಮುಂದುವರಿಸುವಂತೆ ಶುಭ ಹಾರೈಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಮೋಹನ್ ಗೌಡ ನೇತೃತ್ವದಲ್ಲಿ ಕರ್ನಾಟಕ ಸಾವಯವ ಕೃಷಿ ಯೋಜ‌ನೆಯಿಂದ 150ಕ್ಕೂ ಹೆಚ್ಚು ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya
error: Content is protected !!