33.2 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲ್ಮಂಜ: ರೋಟರಿ ಸಮುದಾಯ ದಳ, ಕಲ್ಮಂಜ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ”ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ ,
ಬೆಂದ್ರಾಳ ವೆಂಕಟಕೃಷ್ಣ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಕಕ್ಕಿಂಜೆ ಇವರ ಸಹಯೋಗದಲ್ಲಿ,
ಸತ್ಯನಪಲ್ಕೆ, ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಗಮಶ್ರೀ ಯುವಕ ಮಂಡಲ ಕಲ್ಮಂಜ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಕಲ್ಮಂಜ. ಇವರ ಸಂಪೂರ್ಣ ಸಹಕಾರದೊಂದಿಗೆ.,ಸಂಘ ಸಂಸ್ಥೆಗಳ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಕಲ್ಮಂಜ, ಸಿದ್ದಬೈಲು ಪರಾರಿ ಸ.ಹಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಈ ಆರೋಗ್ಯ ತಪಾಸಣಾ ಶಿಬಿರವು ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಅರಿವು ಹಾಗೂ ಜಾಗೃತಿಯನ್ನು ಮೂಡಿಸಲು ಸಹಕಾರಿ ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ನಡೆಯುತ್ತಿರುವುದರಿಂದ ಜನರಿಗೆ ರೋಗಲಕ್ಷಣಗಳು ಮೂಲದಲ್ಲೇ ಪತ್ತೆಹಚ್ಚಲು ಸಹಕಾರಿ ಎಂದರು.

ಡಾ.ಮುರಳಿಕೃಷ್ಣ ಇರ್ವತ್ರಾಯ ಇವರ ಗ್ರಾಮೀಣ ಆರೋಗ್ಯ ಸೇವೆಯನ್ನು ಶ್ಲಾಘಿಸಿದರು. ಅತಿಥಿಗಳನ್ನು ಸ್ವಾಗತಿಸಿ, ರೋಟರಿ ಸಮುದಾಯ ದಳ, ಕಲ್ಮಂಜದ ಅಧ್ಯಕ್ಷ ಶ್ರೀನಿವಾಸ ರಾವ್ ಮಾತನಾಡಿದರು. ಮುಖ್ಯ ಅತಿಥಿಗಳಾದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋಟರಿಯನ್ ಶ್ರೀಧರ ಕೆವಿ ಮಾತನಾಡಿ ರೋಟರಿ ಕ್ಲಬ್ ಸಾಮಾಜಿಕ ಸೇವಾ ಕಾರ್ಯಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ಜನರು ತಮ್ಮ ದೈನಂದಿನ ಜೀವನದಲ್ಲಿ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವುದೂ ಅಷ್ಟೇ ಮುಖ್ಯವಾಗಿದೆ. ಆರೋಗ್ಯ ಮಹಾಭಾಗ್ಯ ಎಂಬುದು ನಮ್ಮ ಹಿರಿಯರು ನೀಡಿದ ಅಮೂಲ್ಯವಾದ ಗಾದೆ ಮಾತು. ಜೀವನದಲ್ಲಿ ನಾವು ಎಷ್ಟೇ ಸಂಪತ್ತು ಗಳಿಸಿದರೂ, ಉತ್ತಮ ಆರೋಗ್ಯವಿಲ್ಲದಿದ್ದರೆ ಯಾವುದನ್ನೂ ಅನುಭವಿಸಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಮತ್ತು ಒತ್ತಡದಿಂದಾಗಿ ರೋಗಗಳು ಹೆಚ್ಚಾಗುತ್ತಿವೆ. ಆದರೆ, ಅನೇಕರು ಸಮಯದ ಅಭಾವ ಅಥವಾ ಆರ್ಥಿಕ ಸಂಕಷ್ಟದಿಂದಾಗಿ ಆರಂಭದಲ್ಲಿ ಆರೋಗ್ಯದ ಕಡೆಗೆ ಗಮನ ಕೊಡುವುದಿಲ್ಲ, ಇಂತಹ ಆರೋಗ್ಯ ತಪಾಸಣಾ ಶಿಬಿರವು ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಸಮುದಾಯದಳ ಬೆಳ್ತಂಗಡಿ ಅಧ್ಯಕ್ಷ ರೋಟರಿಯನ್ ವೆಂಕಟೇಶ್ ಭಟ್ ಕಜೆ, ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಾಧಿಕಾರಿಗಳಾದ ಡಾ.ಗಿರೀಶ್, ಡಾ.ಪುಲತ್ಸ್ಯ ಗಂಗೋಪಧ್ಯಾಯ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಯೊಗೇಶ್, ಮೊದಲಾದವರು ಉಪಸ್ಥಿತರಿದ್ದರು.

ವೆಂಕಟರಮಣ ಹೆಬ್ಬಾರ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮೋಹನ್ ಗೌಡ, ಸಂಗಮಶ್ರೀ ಯುವಕ ಮಂಡಲದ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷ ಜಯಂತ ರಾವ್, ಸತ್ಯನಪಲ್ಕೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ಜಾನಕಿ, ಶ್ರೀ ಕೃಷ್ಣ ಆಸ್ಪತ್ರೆ, ಸಿಬ್ಬಂದಿಗಳಾದ ಗಣೇಶ್.ಬಿ, ಮ್ಯಾಥ್ಯೂ,ಕೆಎಂಸಿ ಆಸ್ಪತ್ರೆಯ ಪಿ ಆರ್ ಓ ಶ್ರೀಮತಿ ಸುಪ್ರೀತಾ, ಕಾರ್ಯಕ್ರಮದಲ್ಲಿ ,ಸಂಘ ಸಂಸ್ಥೆಗಳ ಸದಸ್ಯರು ಸಾರ್ವಜನಿಕರು ಹಾಗೂ ಗ್ರಾಮಸ್ಥರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

ರೋಟರಿ ಸಮುದಾಯ ದಳ ಕಲ್ಮಂಜದ ಕಾರ್ಯದರ್ಶಿ ವಸಂತಿ ಕಾರ್ಯಕ್ರಮ ನಿರೂಪಿಸಿ, ಶಾಂತಪ್ಪ ಧನ್ಯವಾದವಿತ್ತರು. ಶಿಬಿರದಲ್ಲಿ ತಜ್ಞವೈದ್ಯರ (ಫಿಸಿಶಿಯನ್) ತಪಾಸಣೆ, ರಕ್ತದೊತ್ತಡ (BP) ತಪಾಸಣೆ,ಹಿಮೋಗ್ಲೋಬಿನ್ (HB) ತಪಾಸಣೆ, ಮಧುಮೇಹ (GRBS)ತಪಾಸಣೆ, ರಕ್ತದಲ್ಲಿ, ಮೂರು ತಿಂಗಳ ಸರಾಸರಿ ಸಕ್ಕರೆ ಪ್ರಮಾಣ (HbA1C) ತಪಾಸಣೆ, ಇಸಿಜಿ (ECG), ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ ಮೊದಲಾದ ಆರೋಗ್ಯ ತಪಾಸಣೆ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
error: Content is protected !!