ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೆ.ಪಿ.ಎಸ್. ಪ್ರೌಢಶಾಲೆ ಪುಂಜಾಲಕಟ್ಟೆಯಲ್ಲಿ ಅ. 23 ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 10ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಕ್ಷರ್ ಹಳೆಮನೆ ಅವರು “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಅತ್ಯುತ್ತಮ ವಿಚಾರ ಮಂಡನೆ ಮಾಡಿ ಈ ಸಾಧನೆ ಮಾಡಿದ್ದಾರೆ. ಸಾಧಕ ವಿದ್ಯಾರ್ಥಿಗೆ ಶಾಲೆಯ ವಿಜ್ಞಾನ ಶಿಕ್ಷಕಿ ಧನ್ಯವತಿ ಕೆ. ಮಾರ್ಗದರ್ಶನ ನೀಡಿದ್ದರು.













