ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಜೀವನ ಚರಿತ್ರೆಯ ಬಗ್ಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಪ್ರಕಾಶ್ ಶೆಟ್ಟಿ ನೊಚ್ಚ , ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಮೇಶ್ ಎಸ್ ಮಾಳಗೊಂಡ, ಶ್ರೀರಾಮ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.













