
ಬೆಳ್ತಂಗಡಿ: ಬೆಳ್ತಂಗಡಿಯ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ ವಾಣಿ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.
ಬಾಲಕಿಯರ ತಂಡದ ಮೂವರು ವಿದ್ಯಾರ್ಥಿನಿಯರು ತಮ್ಮ ವೈಯಕ್ತಿಕ ಆಟದ ಸಾಮರ್ಥ್ಯ ಮತ್ತು ಪ್ರತಿಭೆಯ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.













