30.1 C
ಪುತ್ತೂರು, ಬೆಳ್ತಂಗಡಿ
October 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇ-ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಅ. 28ರಂದು ವಿದ್ಯಾರ್ಥಿಗಳಲ್ಲಿ ಇ-ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಜವಾಬ್ದಾರಿಯುತ ವಿಲೇವಾರಿ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಇ-ತ್ಯಾಜ್ಯ ಸಂಗ್ರಹ ಮತ್ತು ಜವಾಬ್ದಾರಿಯುತ ವಿಲೇವಾರಿ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಶಾಲೆಯ ಇಕೋ ಕ್ಲಬ್‌ನ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಇ-ತ್ಯಾಜ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳು ಹಾಗೂ ಅದರ ವೈಜ್ಞಾನಿಕ ನಿರ್ವಹಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಜಾಗೃತಿ ನಾಟಕದ ಮೂಲಕ ಇ-ತ್ಯಾಜ್ಯದ ಅಪಾಯಗಳು ಮತ್ತು ಅದರ ಸೂಕ್ತ ವಿಲೇವಾರಿಯ ಅಗತ್ಯವನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡಲಾಯಿತು. ಅಲ್ಲದೆ, ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವನ್ನು ಹೆಚ್ಚಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಇ-ತ್ಯಾಜ್ಯದ ಜವಾಬ್ದಾರಿಯುತ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿ ಸಿದ್ಧಾಂತ್ ನಿರ್ವಹಿಸಿದರು.

Related posts

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya
error: Content is protected !!