30.1 C
ಪುತ್ತೂರು, ಬೆಳ್ತಂಗಡಿ
October 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಅಂತರ್‌ಶಾಲಾ ಚೆಸ್ ಸ್ಪರ್ಧೆಗೆ ಚಾಲನೆ: ಎಕ್ಸೆಲ್ ಚೆಸ್ ಟ್ರೋಫಿ–2026ರಲ್ಲಿ 250ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ

ಗುರುವಾಯನಕೆರೆ: ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾಳ್ಮೆ, ತಾರ್ಕಿಕ ಚಿಂತನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಶಾಲೆ ಮತ್ತು ಕಾಪುವಿನ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಶ್ರಯದಲ್ಲಿ ಆಯೋಜಿಸಲಾದ ಎಕ್ಸೆಲ್ ಚೆಸ್ ಟ್ರೋಫಿ ಅಂತರ್‌ಶಾಲಾ ಚೆಸ್ ಸ್ಪರ್ಧೆ–2026ಕ್ಕೆ ಚಾಲನೆ ನೀಡಲಾಯಿತು.

ಶ್ರೀ ನಾರಾಯಣ ಗುರು ಸ್ಪೋರ್ಟ್ಸ್ ಆ್ಯಂಡ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉಮಾನಾಥ ಕಾಪು ಅವರು ಸ್ಪರ್ಧೆಯನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಅಂತರರಾಷ್ಟ್ರೀಯ ಚೆಸ್ ಪಟು ಹಾಗೂ ಸ್ಪ್ರಿಂಗರ್ ಚೆಸ್ ಅಕಾಡೆಮಿಯ ಸ್ಥಾಪಕ ಶಾಬ್ದಿಕ್ ವರ್ಮ ಉಪಸ್ಥಿತರಿದ್ದರು. ಎಕ್ಸೆಲ್ ಸಂಸ್ಥೆಯ ಸ್ಥಾಪಕ ಸುಮಂತ್ ಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಸುಮಿತ್ರ ಗೌಡ ಹಾಗೂ ಮುಖ್ಯ ತೀರ್ಪುಗಾರ ಸಾಕ್ಷಾತ್ ಯು.ಕೆ. ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 250ಕ್ಕೂ ಅಧಿಕ ಚೆಸ್ ಆಟಗಾರರು ಭಾಗವಹಿಸಿ ತಮ್ಮ ಚದುರಂಗದ ಕೌಶಲವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಬೌದ್ಧಿಕ ಸಾಮರ್ಥ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಮಹತ್ವ ಪಡೆದಿದೆ.

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆ ಪೂರಕ – ಸುಮಂತ್ ಕುಮಾರ್ ಜೈನ್

ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಕಲಿಕೆಗೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ, ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಚೆಸ್ ಆಟವು ತಾಳ್ಮೆ, ತಾರ್ಕಿಕ ಚಿಂತನೆ ಮತ್ತು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುವ ಗುಣವನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳಿಗೆ ಇಂತಹ ಸ್ಪರ್ಧೆಗಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಉತ್ತಮ ವೇದಿಕೆಯಾಗಿದ್ದು, ಎಕ್ಸೆಲ್ ಸಂಸ್ಥೆ ಶಿಕ್ಷಣದೊಂದಿಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೂ ನಿರಂತರ ಪ್ರೋತ್ಸಾಹ ನೀಡುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸ್ಥಾಪಕ ಸುಮಂತ್ ಕುಮಾರ್ ಜೈನ್ ತಿಳಿಸಿದರು.

Related posts

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!