ಬೆಳ್ತಂಗಡಿ: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಸಮಾಧಾನದ ಪರಿಹಾರ ನೀಡುವುದು ಸರ್ಕಾರದ ಆದ್ಯತೆ ಆಗಿರುವ ಪ್ರಜಾಸೇವೆ ಆಂದೋಲನ ಸಭೆ ಅ.31 ರಂದು ಬೆಳ್ತಂಗಡಿ ಹೋಬಳಿಯ ಶಿರ್ಲಾಲು ಗ್ರಾಮಮಟ್ಟದ ಪ್ರಜಾಸೇವೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಲಿರುವುದು.
ಆದ್ದರಿಂದ ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಕಾರ್ಯಕ್ರಮ ಯಶಸ್ವಿಯಾಗಿ ಮಾಡಿಕೊಡುವಂತೆ ಬೆಳ್ತಂಗಡಿ ತಹಶೀಲ್ದಾರ್ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.













