30.1 C
ಪುತ್ತೂರು, ಬೆಳ್ತಂಗಡಿ
October 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವು ಅ.27 ರಂದು ನಡೆಯಿತು.

ಉದ್ಯಮಿ ರೊನಾಲ್ಡ್ ಲೋಬೊ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ವಂದನೀಯ ಭಗಿನಿ ತೆರೇಸಿಯ ಶೇರಾ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಆಲ್ವಿನ್ ಪಿಂಟೋ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಭಗಿನಿ ಮೋಲಿ ಡಿಕುನ್ನರವರು ಉಪಸ್ಥಿತರಿದ್ದು ಸ್ವಾಗತಿಸಿದರು. ವೇದಿಕೆಯಲ್ಲಿ ತೀರ್ಪುಗಾರರು ಹಾಗೂ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ನವೀನ್ ಉಪಸ್ಥಿತರಿದ್ದರು. ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕಿನ ಬಾಲಕ ಬಾಲಕಿಯರ ಒಟ್ಟು 15 ತಂಡಗಳು ಭಾಗವಹಿಸಿದ್ದು ಬಾಲಕರ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇವರು ಪ್ರಥಮ ಸ್ಥಾನವನ್ನು , ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆದರು. ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಅವರು ದ್ವಿತೀಯ ಸ್ಥಾನವನ್ನು ಪಡೆದರು. ಸಂತ ತೆರೇಸಾ ಕಾಲೇಜಿನ ವಿನ್ಯಾಸ್ ರವರು ಆಲ್ರೌಂಡರ್ ಪ್ರಶಸ್ತಿಯನ್ನು ಪಡೆದು ಕಾಲೇಜಿಗೆ ಹೆಮ್ಮೆ ತಂದರು. ಸಮಾರೋಪ ಸಮಾರಂಭದಲ್ಲಿ ವಿಜಯಿಗಳಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮವನ್ನು ವಿಜ್ಞಾನ ವಿಭಾಗದ ಉಪನ್ಯಾಸಕ ಪ್ರದೀಪ ಪಿಂಟೋ ಹಾಗೂ ಶ್ರೀಮತಿ ಕೀರ್ತಿಕ ನಿರೂಪಿಸಿದರು. ಶ್ರೀಮತಿ ಝೀಟ ಡಿಸೋಜರವರು ವಂದನಾರ್ಪಣೆಗೈದರು.

Related posts

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya
error: Content is protected !!