30.8 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

ಬೆಳ್ತಂಗಡಿ: ಲಾಯಿಲದ ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ, ಆರೋಗ್ಯ, ಆರೈಕೆ ಹಾಗೂ ಸರ್ವತೋಮುಖ ಅಭಿವೃದ್ಧಿಯ ಕುರಿತು ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಂ.ಫಾ. ವಿನೋದ್ ರವರು ವಹಿಸಿದರು.

ಸಭೆಯಲ್ಲಿ ಶಾಲೆಯ ಲೆಕ್ಕ ಸಹಾಯಕರು ಆದ ಐವನ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು , ಶಾಲಾ ಮುಖ್ಯ ಶಿಕ್ಷಕಿಯಾದ ದಿವ್ಯ ವಿಶೇಷ ಮಕ್ಕಳ ಬೆಳವಣಿಗೆಯಲ್ಲಿ ಶಾಲೆ ಮತ್ತು ಪೋಷಕರ ಪಾತ್ರದ ಮಹತ್ವವನ್ನು ತಿಳಿಸಿದರು. ಮಕ್ಕಳಿಗೆ ಶಾಲೆಯಲ್ಲಿ ನೀಡಲಾಗುತ್ತಿರುವ ಶಿಕ್ಷಣ, ವೈಯಕ್ತಿಕ ತರಬೇತಿ, ದೈನಂದಿನ ಜೀವನ ಕೌಶಲಗಳು ಹಾಗೂ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಿರುವ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಯಿತು.

ಅಧ್ಯಕ್ಷ ಭಾಷಣದಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯ, ವರ್ತನೆ, ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಮತ್ತು ದೈನಂದಿನ ಚಟುವಟಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಸುಧಾರಿಸುವ ಕುರಿತು ಚರ್ಚಿಸಲಾಯಿತು. ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಮನೆಯಲ್ಲಿ ತರಬೇತಿ ನೀಡುವುದು, ಮಕ್ಕಳೊಂದಿಗೆ ಪ್ರೀತಿಯಿಂದ ವರ್ತಿಸುವುದು ಹಾಗೂ ಅವರಲ್ಲಿ ಆತ್ಮವಿಶ್ವಾಸ ಬೆಳೆಸುವ ಅಗತ್ಯವನ್ನು ಪೋಷಕರಿಗೆ ತಿಳಿಸಲಾಯಿತು.


ಈ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳ ಪ್ರಗತಿ, ಸಮಸ್ಯೆಗಳು ಹಾಗೂ ಅಗತ್ಯಗಳ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡರು. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಾಲೆಯ ಶಿಕ್ಷಕರು ಮತ್ತು ಪೋಷಕರು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವ ಕುರಿತು ಒಮ್ಮತ ವ್ಯಕ್ತವಾಯಿತು.


ವಿಶೇಷ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸೂಕ್ತ ಆರೈಕೆ ಮತ್ತು ಸಮಾನ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂತಹ ಪೋಷಕರ ಸಭೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಲಾಯಿತು. ಸಭೆಯಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟ: ಆತಿಥೇಯ ಎಸ್‌ಡಿಎಂ ಪಾಲಿಟೆಕ್ನಿಕ್‌ಗೆ ಪ್ರಥಮ ಸ್ಥಾನ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

Suddi Udaya
error: Content is protected !!