29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಪ್ರಕರಣದ ಮರುತನಿಖೆ ; ಮಂಗಳೂರಿನಲ್ಲಿ ಎಸ್‌ಐಟಿ ವಿಚಾರಣೆಗೆ ಹಾಜರಾದ ಅಂದಿನ ಡಿವೈಎಸ್‌ಪಿ, ಸಿಪಿಐ & ಪಿಎಸ್‌ಐ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಸೌಜನ್ಯ ಭೀಕರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರುತನಿಖೆ ಪ್ರಕ್ರಿಯೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದ್ದು, ಈ ಮಹತ್ವದ ತನಿಖೆಯ ಭಾಗವಾಗಿ ಪ್ರಕರಣ ನಡೆದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಬೆಳ್ತಂಗಡಿಯ ಅಂದಿನ ಡಿವೈಎಸ್‌ಪಿ, ಸಿಪಿಐ ಹಾಗೂ ಪಿಎಸ್‌ಐ ಸೇರಿದಂತೆ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಮಂಗಳೂರಿನ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ತನಿಖಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಘಟನೆಗೆ ಸಂಬಂಧಿಸಿದ ಮಹತ್ವದ ಕಡತಗಳು ಹಾಗೂ ಮೂಲ ದಾಖಲೆಗಳೊಂದಿಗೆ ಅಧಿಕಾರಿಗಳು ಹಾಜರಾಗಿದ್ದಾರೆ. ಧರ್ಮಸ್ಥಳ ಮತ್ತು ಉಜಿರೆ ಭಾಗದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಆರಂಭಿಕ ತನಿಖೆಯಲ್ಲಿ ಲೋಪಗಳು ನಡೆದಿವೆ ಹಾಗೂ ಸಾಕ್ಷ್ಯ ನಾಶಪಡಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಮರುತನಿಖೆಗೆ ಸೂಚಿಸಲಾಗಿದ್ದು, ಅಂದಿನ ತನಿಖಾ ತಂಡದಲ್ಲಿದ್ದ ಅಧಿಕಾರಿಗಳನ್ನು ಎಸ್‌ ಐಟಿ ಮುಖ್ಯಸ್ಥರು ಮತ್ತು ಸಿಬ್ಬಂದಿ ಮುಖಾಮುಖಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.ಬೆಳ್ತಂಗಡಿಯ ಅಂದಿನ ಡಿವೈಎಸ್‌ಪಿ (DySP), ವೃತ್ತ ನಿರೀಕ್ಷಕರು (CPI) ಹಾಗೂ ಪೊಲೀಸ್ ಸಬ್‌ ಇನ್ಸ್ಪೆಕ್ಟರ್ (PSI) ಎಸ್ಐಟಿ ಉನ್ನತಾಧಿಕಾರಿಗಳ ಮುಂದೆ ವಿಚಾರಣೆಗೆ ಕುಳಿತಿದ್ದಾರೆ.
ಕೇಸ್ ಡೈರಿ (Case Diary), ಪ್ರಥಮ ವರ್ತಮಾನ ವರದಿ (FIR), ಮಹಜರ್ ಪ್ರತಿಗಳು ಹಾಗೂ ವಶಪಡಿಸಿಕೊಂಡಿದ್ದ ಸಾಕ್ಷಾಧಾರಗಳ ಕುರಿತು ಎಸ್‌ಐಟಿ ಅಧಿಕಾರಿಗಳು ಸುದೀರ್ಘ ಪ್ರಶ್ನಾವಳಿಗಳನ್ನು ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.

Related posts

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಎಸ್‌ಐಆರ್ ದುರುಪಯೋಗಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!