ಬೆಳ್ತಂಗಡಿ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 14 /17ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದ 14ರ ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಕುಮಾರಿ ನೀಕ್ಷಾ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೂಕ್ರಬೆಟ್ಟು ಇಲ್ಲಿಯ ವಿದ್ಯಾರ್ಥಿನಿ ಪ್ರಥಮ ಸ್ಥಾನವನ್ನು ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ಕ್ರೀಡಾಪಟುವಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗ, ಶಾಲೆಯ ಎಲ್ಲಾ ಸಮಿತಿಯ ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.












