27.3 C
ಪುತ್ತೂರು, ಬೆಳ್ತಂಗಡಿ
October 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.1 : ಚಿಕ್ಕಮಗಳೂರಿನಲ್ಲಿ ವಿದ್ವತ್ ಪಿಯು ಕಾಲೇಜಿನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರೀಕ್ಷೆ: ಪ್ರತಿಭಾನ್ವಿತರಿಗೆ ಲ್ಯಾಪ್ ಟಾಪ್, ಟ್ಯಾಬ್, ಉಚಿತ ಶಿಕ್ಷಣದ ಉಡುಗೊರೆ

ಚಿಕ್ಕಮಗಳೂರು: ಶೈಕ್ಷಣಿಕ ಶ್ರೇಷ್ಠತೆ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನ 1 ರಂದು ಚಿಕ್ಕಮಗಳೂರಿನ ಪ್ರೈಡ್ ಯುರೋ ಶಿಕ್ಷಣ ಸಂಸ್ಥೆಯಲ್ಲಿ (PRIDE EURO School, 4th Cross, ವಿಜಯ ನಗರ, ಹೊಸಮನೆ Extension, ಚಿಕ್ಕಮಗಳೂರು ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಿದೆ.

ವಿದ್ಯಾರ್ಥಿಗಳಲ್ಲಿರುವ ಶೈಕ್ಷಣಿಕ ಪ್ರತಿಭೆಯನ್ನು ಗುರುತಿಸಿ, ಅದನ್ನು ಪೋಷಿಸುವುದು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವಿನೊಂದಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವುದು ಈ ಪ್ರತಿಭಾ ಪರೀಕ್ಷೆಯ ಉದ್ದೇಶವಾಗಿದೆ.

ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರುವ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಇದರ ಮೂಲಕ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಸಹಕಾರಿಯಾಗಲಿದೆ.

ವಿದ್ವತ್ ಪಿಯು ಕಾಲೇಜು ತನ್ನ ಪ್ರಥಮ ಬ್ಯಾಚ್‌ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಿಸಿದೆ. KCET ಎಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ನಾಲ್ವರು ವಿದ್ಯಾರ್ಥಿಗಳಿಗೆ AIIMS ಪ್ರವೇಶ ದೊರೆತಿರುವುದು ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಜಿಲ್ಲೆಯ ಪ್ರತಿಭಾವಂತ ಮತ್ತು ಉನ್ನತ ಶಿಕ್ಷಣದ ಆಶಯ ಹೊಂದಿರುವ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳು ಈ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.

ನೋಂದಣಿಗಾಗಿ ಸಂಪರ್ಕಿಸಿ: 📞 7618775602 📞 7618775600
ಆನ್‌ಲೈನ್ ನೋಂದಣಿ: https://www.vidvath.org/talent-test/

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!