30.8 C
ಪುತ್ತೂರು, ಬೆಳ್ತಂಗಡಿ
October 29, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಡಾ| ಪ್ರದೀಪ್‌ರವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ: ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದ ಮೂರು ಮಂದಿ ಆರೋಪಿಗಳನ್ನು ಅ.29ರಂದು ಬೆಳ್ತಂಗಡಿ ಪೊಲೀಸರು ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ತಮ್ಮ ಕಸ್ಟಡಿಗೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ಮಂಗಳೂರು ಜೈಲಿನಿಂದ ಬೆಳ್ತಂಗಡಿ ಜೆಎಂಫಿ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿ ಎರಡು ದಿವಸಕ್ಕೆ ( ಅ. 29& 30) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಮೂರು ಆರೋಪಿಗಳಾದ ರವಿ ಪೂಜಾರಿ, ಸುರೇಶ್, ದಿನೇಶ್ ಪ್ರಭುವಿನ ಹೆಚ್ಚಿನ ವಿಚಾರಣೆ, ಮಹಜರು, ಮೊಬೈಲ್ ದತ್ತಾಂಶಗಳ ಪರಿಶೀಲನೆ ಸಹಿತ ಹಲವು ಉದ್ದೇಶದಿಂದ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.


ಘಟನೆ ಹಿನ್ನಲೆ:
ನಾವೂರು ಪೇಟೆಯಲ್ಲಿರುವ ಸ್ವಾತಿ ಕಟ್ಟಡದಲ್ಲಿ ಡಾ| ಪ್ರದೀಪ್ ಅವರು ಕಳೆದ 27 ವರ್ಷಗಳಿಂದ ವೈದ್ಯಕೀಯ ಸೇವೆಯನ್ನು ನೀಡುತ್ತಾ ಬರುತ್ತಿದ್ದು, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು. ಅಪಾರ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ನಾವೂರು ಸೇರಿದಂತೆ ತಾಲೂಕಿನಲ್ಲಿ ಮನೆಮಾತಾಗಿದ್ದ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಅ.6ರಂದು ತಡ ರಾತ್ರಿ ಯಾರೋ ಕಿಡಿಗೇಡಿಗಳು ಡಿಸೇಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಘಟನೆ ಬೆಳ್ತಂಗಡಿ ತಾಲೂಕನ್ನು ಬೆಚ್ಚಿಬೀಳಿಸಿತ್ತು. ಕ್ಲಿನಿಕ್‌ನ ಕಿಟಿಕಿ ಮೂಲಕ ಒಳಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಬೆಂಕಿ ಕ್ಲಿನಿಕ್‌ನ ಒಳಗೆ ಮೂರು ಕೊಠಡಿಗಳಿಗೆ ವ್ಯಾಪಿಸಿತ್ತು. ಕೊಠಡಿಯಲ್ಲಿದ್ದ ಔಷಧಿಗಳು, ವೈದ್ಯಕೀಯ ಸಲಕರಣೆಗಳು ಸಂಪೂರ್ಣ ಸುಟ್ಟು ಹೋಗಿತ್ತು. ಇದರಿಂದಾಗಿ ಸುಮಾರು ರೂ.೩ ಲಕ್ಷ ನಷ್ಟ ಉಂಟಾಗಿತ್ತು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್‌ಪಿ ರೋಹಿಣಿ, ಬೆಳ್ತಂಗಡಿ ಠಾಣಾ ಪೊಲೀಸರು, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ ೩೨೬, ೩೨೪ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೊತ್ತಿಕೊಂಡ ಪೊಲೀಸರು ವಿವಿಧ ಮೂಲಗಳಿಂದ ಮಾಹಿತಿಯನ್ನು ಸಂಗ್ರಹಿಸಿ, ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ನಾವೂರು ನಿವಾಸಿ ರವಿ ಕುಮಾರ್ ನನ್ನು ಅ.13ರಂದು ಪ್ರಥಮವಾಗಿ ಬಂಧಿಸಿ ವಿಚಾರಣೆ ನಡೆಸಿದ್ದರು. ಆತ ನೀಡಿದ ಮಾಹಿತಿಯಂತೆ ಬಳಿಕ ನಾವೂರು ನಿವಾಸಿ ಸುರೇಶ್ ಪಿ.ಎನ್ ಎಂಬಾತನನ್ನು ಅ.14 ರಂದು ಬೆಳಿಗ್ಗೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಅದೇ ದಿನ ರಾತ್ರಿ ಪುತ್ತೂರಿನ ಕೌಡಿಚಾರು ಎಂಬಲ್ಲಿದ್ದ ದಿನೇಶ್ ಪ್ರಭು ಎಂಬವರನ್ನು ಪೊಲೀಸರು ರಾತ್ರಿ ಬಂಧಿಸಿ, ಬೆಳ್ತಂಗಡಿ ಠಾಣೆಗೆ ಕರೆತಂದಿದ್ದರು. ಪ್ರಕರಣದ ವಿಚಾರಣೆಯ ಬಳಿಕ ಅ.15 ರಂದು ಮೂರು ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಬ್ಬರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿರುವ ರವಿಕುಮಾರ್ ಮೂಲಕ ಪ್ರಕರಣದ ಹೆಚ್ಚಿನ ತನಿಖೆ ನಡೆಸಿ, ಆತನನ್ನು ಅ.17 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

Related posts

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ರೆಖ್ಯ ಬಾಲಕೃಷ್ಣ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!