32.5 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡುತ್ತಿದೆ ಎಂದು ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋ ತಿಳಿಸಿದ್ದಾರೆ.

ವಿಶೇಷ ಆಫರ್ ಮಾರಾಟದಲ್ಲಿ ವಿವಿಧ ಕಂಪನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು ಹಾಗೂ ಫರ್ನಿಚರ್‌ಗಳಿಗೆ ವಿಶೇಷ ದರದಲ್ಲಿ ಖರೀದಿ ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ಸ್ಪರ್ಧಾತ್ಮಕ ದರದಲ್ಲಿ ಒದಗಿಸುವುದರ ಜೊತೆಗೆ ಶೇ.50 ರಷ್ಟು ರಿಯಾಯಿತಿ ನೀಡುತ್ತಿದೆ. ಟಿವಿ, ಫ್ರಿಜ್, ವಾಷಿಂಗ್ ಮೆಷಿನ್, ಏರ್ ಕಂಡೀಷನರ್, ಫ್ಯಾನ್, ಮಿಕ್ಸರ್ ಗ್ರೈಂಡರ್, ಕುಕ್ಕರ್, ಅಡುಗೆ ಪಾತ್ರೆಗಳು, ಬೆಡ್, ಕಚೇರಿ ಕುರ್ಚಿ, ಅಲ್ಮೆರಾ, ಸೋಫಾ ಸೇರಿದಂತೆ ಹಲವು ಉತ್ಪನ್ನಗಳು ಮಳಿಗೆಯಲ್ಲಿ ಲಭ್ಯವಿದೆ.


ವಿದ್ಯಾರ್ಥಿಗಳಿಗೆ ವಿಶೇಷ ಆಫರ್- ಐಫೋನ್ ಗೆಲ್ಲುವ ಅವಕಾಶ:
ಸೋಜಾ ಮಳಿಗೆಯು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ವಿಶೇಷ ಐಫೋನ್ ಆಫರ್ ಅನ್ನು ಘೋಷಿಸಿದೆ. ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಸ್ಥೆಗೆ ಬಂದು ಉಚಿತ ಕೂಪನ್ ಪಡೆದು ಲಕ್ಕಿ ಡ್ರಾದಲ್ಲಿ ಭಾಗವಹಿಸಿ ಐಫೋನ್ ಸೇರಿದಂತೆ ಆಕರ್ಷಕ 10 ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಕಲ್ಪಿಸಲಾಗಿದೆ.

ಆಕಾಶ್ ಮಾಸಿಕ ಉಳಿತಾಯ ಯೋಜನೆ:
ಗ್ರಾಹಕರಿಗೆ ಉಳಿತಾಯದ ಉತ್ತಮ ಅವಕಾಶದೊಂದಿಗೆ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಸೋಜಾ ಎಲೆಕ್ಟಾçನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಆಕಾಶ್ ಮಾಸಿಕ ಉಳಿತಾಯ ಯೋಜನೆ ಪ್ರಾರಂಭಗೊAಡಿದೆ. ಸೋಜಾ ಎಲೆಕ್ಟಾçನಿಕ್ಸ್ನ ೩೨ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಅಂಗವಾಗಿ ರೂಪಿಸಿರುವ ಈ ಯೋಜನೆಯಲ್ಲಿ ಗ್ರಾಹಕರು ಮಾಸಿಕವಾಗಿ ರೂ. ೧೦೦೦ ಪಾವತಿಸಿ, ಉಳಿತಾಯ ಮಾಡುವ ಮೂಲಕ ವಿವಿಧ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಹೊಂದಿದ್ದಾರೆ.

Related posts

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!