29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.2: ಇಂದಬೆಟ್ಟುವಿನಲ್ಲಿ ಸಹನಾಶ್ರೀ ಕ್ರೆಡಿಟ್ ಸೌಹಾರ್ದ ಸೊಸೈಟಿಯ 2ನೇ ಶಾಖೆ ಶುಭಾರಂಭ: ಸಹನಾಶ್ರೀ ಫೌಂಡೇಶನ್ ಉದ್ಘಾಟನೆ-ಆರ್ಥಿಕ ಚಟುವಟಿಕೆಗಳ ಬಲವರ್ಧನೆಗೆ ಹೊಸ ಹೆಜ್ಜೆ

ಬೆಳ್ತಂಗಡಿ: ಉಜಿರೆಯ ಪ್ರತಿಷ್ಠಿತ ಸಹನಾಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಎರಡನೇ ಶಾಖೆಯು ನ.2 ರಂದು ಇಂದಬೆಟ್ಟುವಿನ ತೇಜಸ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಸಹನಾಶ್ರೀ ಫೌಂಡೇಶನ್ ಉದ್ಘಾಟನಾ ಕಾರ್ಯಕ್ರಮವೂ ನಡೆಯಲಿದೆ ಎಂದು ಸೊಸೈಟಿಯ ಸ್ಥಾಪಕಾಧ್ಯಕ್ಷ ರಾಜೇಶ್ ಪುದುಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್ರಾ ಫೌಂಡೇಶನ್ ಅಧ್ಯಕ್ಷ ರೇ. ಫಾ. ಶಾಜಿ ಮ್ಯಾಥ್ಯೂ ವೆಟಮ್ ತಡತ್ತಿಲ್ ಅವರು ಆಶೀರ್ವಚನ ನೀಡಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಉದ್ಘಾ ಟನೆ ನೆರವೇರಿಸಲಿದ್ದಾರೆ.


ಸಹನಾಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಹಾಗೂ ಸಹನಾಶ್ರೀ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ರಾಜೇಶ್ ಪುದುಶೇರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಕೆ. ಗಂಗಾಧರ ಗೌಡ, ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ ಗೌಡ, ಭಾರತೀಯ ಆಹಾರ ನಿಗಮದ ಸದಸ್ಯ ವೇಣು ಯಾದವ್, ಬಂಗಾಡಿ ಅರಮನೆಯ ಯಶೋಧರ್ ಬಳ್ಳಾಲ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಉರುವಾಲು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮಿತಾ ಪೂಜಾರಿ, ಹಿರಿಯ ಸಹಕಾರಿ ಧುರೀಣ ಲಕ್ಷ್ಮಣ ಗೌಡ ಇರ್ತಿಲಾಲ್, ನಾವೂರಿನ ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್, ಡಿಎಸ್‌ಎಸ್ ಅಂಬೇಡ್ಕರ್‌ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಬಿ.ಕೆ. ವಸಂತ್, ದಕ್ಷಿಣ ಕನ್ನಡ ಸಹಕಾರಿ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎನ್., ಸೋಮೇಶ್ವರ ಪುರಸಭೆಯ ಕೌನ್ಸಿಲರ್ ದೀಪಕ್ ಪಿಲಾರ್ ಹಾಗೂ ಬೆಳ್ತಂಗಡಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಟಿ. ಸೆಬಾಸ್ಟಿಯನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಆರ್ಥಿಕ ಚಟುವಟಿಕೆಗಳ ಬಲವರ್ಧನೆಗೆ ಹೊಸ ಹೆಜ್ಜೆ: ರಾಜೇಶ್ ಪುದುಶೇರಿ
ಪ್ರಾಮಾಣಿಕ ಸೇವೆಯ ಮೂಲಕ ಹಲವು ವರ್ಷಗಳಿಂದ ಗ್ರಾಹಕರ ನಂಬಿಕೆ ಮತ್ತು ವಿಶ್ವಾಸ ಗಳಿಸಿರುವ ಸಹನಾಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಸ್ಥಳೀಯ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಇನ್ನಷ್ಟು ಹತ್ತಿರವಾಗುವ ಉದ್ದೇಶದಿಂದ ಇಂದಬೆಟ್ಟುವಿನಲ್ಲಿ ಎರಡನೇ ಶಾಖೆಯನ್ನು ಆರಂಭಿಸುತ್ತಿದೆ. ಈ ಮೂಲಕ ಜನರಿಗೆ ಸುಲಭ ಹಾಗೂ ವಿಶ್ವಾಸಾರ್ಹ ಸಹಕಾರಿ ಹಣಕಾಸು ಸೇವೆಗಳನ್ನು ಒದಗಿಸುವುದರೊಂದಿಗೆ ಸ್ಥಳೀಯ ಆರ್ಥಿಕ ಚಟುವಟಿಕೆಗಳ ಬಲವರ್ಧನೆಗೂ ಸಹಕಾರಿಯಾಗಲಿದೆ ಎಂದು ಸಹನಾಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ರಾಜೇಶ್ ಪುದುಶೇರಿ ಹೇಳಿದರು.

Related posts

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಎಕ್ಸೆಲ್ ವಿದ್ಯಾರ್ಥಿಗಳು ಭಾರತದ ಅತ್ಯುನ್ನತ ವೈದ್ಯಕೀಯ ವಿದ್ಯಾ ಸಂಸ್ಥೆ ಏಮ್ಸ್ ಗೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!